ಪಿಯುಸಿ ವಿದ್ಯಾರ್ಥಿಗಳಿಗೆ ಸ್ಟಡಿ ಹಾಲಿಡೇ ರದ್ದು- ಪದವಿ ಪೂರ್ವ ಶಿಕ್ಷಣ ಇಲಾಖೆ ಮಹತ್ವದ ಆದೇಶ

ಬೆಂಗಳೂರು, ಜ. 20 : ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಬಿಗ್ ಶಾಕ್ ನೀಡಿದೆ. ಈವರೆಗೆ ನೀಡುತ್ತಿದ್ದ ಸ್ಟಡಿ ಹಾಲಿಡೇಸ್ ಗೆ ಬ್ರೇಕ್ ಹಾಕಿ ಸರ್ಕಾರ ನಿರ್ಧಾರ ಕೈಗೊಂಡಿದೆ. ಪಿಯು ಫಲಿತಾಂಶ ಸುಧಾರಣೆ ಉದ್ದೇಶದಿಂದ ಈ ಮಹತ್ವದ ನಿರ್ಧಾರ ಕೈಗೊಂಡಿರುವುದಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.

Advertisement

ಇನ್ನು ಮುಂದೆ ಪರೀಕ್ಷೆ ಮುಗಿಯುವವರೆಗೂ ಪಿಯು ವಿದ್ಯಾರ್ಥಿಗಳು ಕಡ್ಡಾಯವಾಗಿ ಕಾಲೇಜಿಗೆ ಹಾಜರಾಗಬೇಕಾಗುತ್ತದೆ. ಈವರೆಗೆ ಪೂರ್ವಸಿದ್ಧತಾ ಪರೀಕ್ಷೆ ಮುಗಿದ ಬಳಿಕ ಸುಮಾರು ಒಂದು ತಿಂಗಳ ಕಾಲ ವಿದ್ಯಾರ್ಥಿಗಳಿಗೆ ಸ್ಟಡಿ ಹಾಲಿಡೇ ನೀಡಲಾಗುತ್ತಿತ್ತು. ಆದರೆ ಈ ವ್ಯವಸ್ಥೆಯಿಂದ ನಿರೀಕ್ಷಿತ ಫಲಿತಾಂಶ ಸಿಗುತ್ತಿಲ್ಲ ಎಂಬ ಕಾರಣದಿಂದ ಇಲಾಖೆ ಹೊಸ ಮಾರ್ಗಸೂಚಿ ಹೊರಡಿಸಿದೆ.

ಫೆಬ್ರವರಿ 26ರವರೆಗೆ ಕಾಲೇಜುಗಳನ್ನು ನಡೆಸಲು ಇಲಾಖೆ ನಿರ್ಧರಿಸಿದ್ದು, ವಿದ್ಯಾರ್ಥಿಗಳನ್ನು ಕಾಲೇಜಿನಲ್ಲಿ ಉಪಾನ್ಯಾಸಕರ ನೇತೃತ್ವದಲ್ಲಿಯೇ ಮುಖ್ಯ ಪರೀಕ್ಷೆಗೆ ಸಿದ್ಧಪಡಿಸುವಂತೆ ಸೂಚನೆ ನೀಡಲಾಗಿದೆ.

ಉಪನ್ಯಾಸಕರ ನೇತೃತ್ವದಲ್ಲಿ ಗ್ರೂಪ್ ಸ್ಟಡಿ ವ್ಯವಸ್ಥೆ ಜಾರಿಗೊಳಿಸಲು ಇಲಾಖೆ ಮುಂದಾಗಿದೆ. ಪಠ್ಯ ಪುನರವಲೋಕನ, ಅನುಮಾನ ನಿವಾರಣೆ, ಪ್ರಶ್ನೋತ್ತರ ಚರ್ಚೆಗಳ ಮೂಲಕ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಸಜ್ಜುಗೊಳಿಸಬೇಕು ಎಂದು ಕಾಲೇಜುಗಳಿಗೆ ಸೂಚಿಸಲಾಗಿದೆ. ಜೊತೆಗೆ ಉಪನ್ಯಾಸಕರು ಕೂಡ ಪರೀಕ್ಷೆ ಮುಗಿಯುವವರೆಗೂ ಕಡ್ಡಾಯವಾಗಿ ಕಾಲೇಜಿಗೆ ಹಾಜರಾಗಬೇಕು ಎಂದು ಆದೇಶಿಸಲಾಗಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ವಿದೇಶ

ಅಮೆರಿಕದಲ್ಲಿ ಭಾರಿ ಹಿಮಪಾತ: 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು, ಶಾಲೆಗಳಿಗೆ ರಜೆ

ರಾಜ್ಯ / ದೇಶ

ಫೆ.26ಕ್ಕೆ ಕೆನಡಾದ ಪ್ರಧಾನಿ ಮಾರ್ಕ್ ಕಾರ್ನಿ ಭಾರತಕ್ಕೆ ಭೇಟಿ

ಕ್ರೀಡೆ, ತಾಲೂಕು, ಬೆಳ್ತಂಗಡಿ

ಬಂಗಾಡಿ : ಯುವ ಸಂಗಮ ಸೇವಾ ಸಮಿತಿ ಬೆಳ್ತಂಗಡಿ ವತಿಯಿಂದ “ಯುವ ಸಂಗಮ ಪ್ರೀಮಿಯರ್ ಲೀಗ್” ಕ್ರಿಕೆಟ್ ಪಂದ್ಯಾಟ

⚠️ Contents are protected on this website.