ಬೆಳ್ತಂಗಡಿ : ಶಾಸಕರ ಮುತುವರ್ಜಿಯಿಂದ ಪದವು-ಬೊಳ್ಮನಾರ್ ಮುಖ್ಯರಸ್ತೆಗೆ ತುರ್ತು ದುರಸ್ತಿ ; ಮಳೆಗಾಲದ ಬಳಿಕ ರೂ.30 ಲ. ವೆಚ್ಚದಲ್ಲಿ ಮರುಡಾಮರೀಕರಣ

ಬೆಳ್ತಂಗಡಿ, ಜು. 22 : ತಾಲೂಕಿನ ಪುದುವೆಟ್ಟು ಗ್ರಾಮದ ಪದವು–ಬೊಳ್ಮನಾರ್ ಮುಖ್ಯರಸ್ತೆಯ ದುಸ್ಥಿತಿಯನ್ನು ಶಾಸಕ ಶ್ರೀ ಹರೀಶ್ ಪೂಂಜ ಅವರ ಮುತುವರ್ಜಿಯಿಂದ ಪರಿಶೀಲಿಸಿ, ಸಾರ್ವಜನಿಕರ ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.

Advertisement

ಇತ್ತೀಚಿನ ಭಾರೀ ಮಳೆಯಿಂದ ಹದಗೆಟ್ಟ ರಸ್ತೆಗೆ ತಾತ್ಕಾಲಿಕವಾಗಿ ವೆಟ್ ಮಿಕ್ಸ್ ಹಾಕಿ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗಿದೆ. ಜೊತೆಗೆ, ರಸ್ತೆಯಲ್ಲಿ ಶೇಖರಗೊಂಡ ಮಳೆನೀರು ಸರಾಗವಾಗಿ ಹರಿದು ಹೋಗುವಂತೆ ಅಗತ್ಯ ಚರಂಡಿ ನಿರ್ಮಾಣ ಕಾರ್ಯಕ್ಕೂ ಕ್ರಮ ಕೈಗೊಳ್ಳಲಾಗಿದೆ.

ಈ ರಸ್ತೆಯ ಮರುಡಾಮರೀಕರಣ ಕಾಮಗಾರಿಗಾಗಿ ಈಗಾಗಲೇ ರೂ.30 ಲಕ್ಷ ಅನುದಾನವನ್ನು ಮಂಜೂರು ಮಾಡಲಾಗಿದ್ದು, ಅಗತ್ಯ ಆಡಳಿತಾತ್ಮಕ ಅನುಮೋದನೆಯೂ ದೊರೆತಿದೆ. ಪ್ರಸ್ತುತ ಮಳೆಗಾಲ ಇರುವುದರಿಂದ ಶಾಶ್ವತ ಕಾಮಗಾರಿಯನ್ನು ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ತಾತ್ಕಾಲಿಕ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ.

ಮಳೆಗಾಲ ಮುಗಿದ ತಕ್ಷಣವೇ ರಸ್ತೆ ಮರುಡಾಮರೀಕರಣ ಕಾಮಗಾರಿಯನ್ನು ಆರಂಭಿಸಿ, ಉತ್ತಮ ಗುಣಮಟ್ಟದ ಶಾಶ್ವತ ರಸ್ತೆ ನಿರ್ಮಾಣದ ಮೂಲಕ ಸಾರ್ವಜನಿಕರ ಬಹುಕಾಲದ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲಾಗುವುದು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಕೃಷಿಕ ಕೃಷ್ಣಪ್ಪ ಕುಲಾಲ್ ಅಂತ್ಯಕ್ರಿಯೆಯಲ್ಲಿ ಪರಿಸರ ಕಾಳಜಿ – ಮೃತ ಪ್ರಕೃತಿ ಪ್ರೀತಿ ಜೀವಂತವಾಗಿರಿಸಲು ಗಿಡ ವಿತರಣೆ !

⚠️ Contents are protected on this website.