ಪುತ್ತೂರು : ಮತ್ತೆ ಪುತ್ತೂರು ಕ್ಷೇತ್ರದಲ್ಲಿ ಬಿಜೆಪಿಯನ್ನು ಗೆಲ್ಲಿಸಿ ತೋರಿಸುತ್ತೇನೆ ! – ಅರುಣ್ ಕುಮಾರ್ ಪುತ್ತಿಲ

ಪುತ್ತೂರು : ಕಳೆದ ಚುನಾವಣೆಯಲ್ಲಿ ಕಾರ್ಯಕರ್ತರ ಭಾವನೆ ಮತ್ತು ಸಾಮಾನ್ಯ ಕಾರ್ಯಕರ್ತನಿಗೆ ಸೂಕ್ತವಾದ ಸ್ಥಾನಮಾನ ಕೊಡಲಿಲ್ಲ. ಆಗಿರುವ ಎಲ್ಲಾ ಜನಪ್ರತಿನಿಧಿಗಳು ಕೂಡಾ ಕಾರ್ಯಕರ್ತನ ಮಾನಸಿಕತೆಯನ್ನು ಅರಿತುಕೊಂಡು ಕೆಲಸ ಮಾಡಲಿಲ್ಲ ಎಂಬ ಕಾರಣಕ್ಕಾಗಿ ಕಾರ್ಯಕರ್ತರ ಅಪೇಕ್ಷೆಗೆ ಅನುಗುಣವಾಗಿ ನಾನು ಚುನಾವಣೆಗೆ ಸ್ಪರ್ಧಿಸಿದ್ದು ಎಂದು ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ಹೇಳಿಕೆ ನೀಡಿದ್ದಾರೆ.

Advertisement

ಪುತ್ತೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮಾಂತರ ಮತ್ತು ನಗರ ಭಾಗವನ್ನು ಒಂದು ಮಾಡಿಕೊಟ್ಟರೆ ನಾನು ನಾಳೆಯೇ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತೇನೆ. ಮತ್ತೆ ಈ ಕ್ಷೇತ್ರದಲ್ಲಿ ಬಿಜೆಪಿಯನ್ನು ಗೆಲ್ಲಿಸಿ ತೋರಿಸುತ್ತೇನೆ. ಜವಾಬ್ದಾರಿ ಕೊಡುವ ವಿಚಾರದಲ್ಲಿ ರಾಜ್ಯ ನಾಯಕರು ಕೂತು ಮಾತನಾಡಿದ್ದಾರೆ. ಜವಾಬ್ದಾರಿ ಕೊಡಬೇಕೆಂಬ ಸೂಚನೆ ನೀಡಿದ್ದಾರೆ. ಏನು ಕೊಟ್ಟಿದ್ದಾರೆ ಎಂಬುದನ್ನು ಬಿಜೆಪಿ ಜಿಲ್ಲಾಧ್ಯಕ್ಷರಲ್ಲಿ ಪತ್ರಕರ್ತರೇ ಪ್ರಶ್ನೆ ಮಾಡಬೇಕಾಗಿದೆ. ಅಧಿಕಾರ ಸ್ಥಾನಮಾನಕ್ಕಾಗಿ ಹೋರಾಟ ಮಾಡುತ್ತಿರುವುದು ಹೌದಾದರೆ ನನಗೆ ಅನೇಕ ನಾಯಕರ ಸಂಪರ್ಕವಿದೆ. ದೆಹಲಿಯಲ್ಲಿರುವ ನಾಯಕರ ಜೊತೆಗೆ ನಿರಂತರ ಸಂಪರ್ಕದ ಜೊತೆಗೆ ಏನೂ ಬೇಕಾದರೂ ಮಾಡಬಹುದಿತ್ತು. ಆದರೆ ವ್ಯವಸ್ಥೆಯ ಹೊರಗೆ ಸರಿಯಾಗಿ ಇರಬೇಕೆಂಬ ದೃಷ್ಟಿಕೋನದಿಂದ ಯಾವತ್ತು ಕೂಡ ಅಧಿಕಾರ ಮತ್ತು ಸ್ಥಾನ ಮಾನಕ್ಕಾಗಿ ಹೋರಾಟ ಮಾಡಿದ ಯಾವುದೇ ಸಂದರ್ಭವಿಲ್ಲ. ಆದರೆ ಈ ರೀತಿಯ ಧಾರ್ಮಿಕ ಕಾರ್ಯಕ್ರಮಗಳಿಗೆ ಅಪಾದನೆ ಮಾಡುತ್ತಿರುವುದಕ್ಕೆ ನಮಗೆನೂ ಉತ್ತರ ಕೊಡಲಾಗುವುದಿಲ್ಲ ಶ್ರೀನಿವಾಸನೇ ಉತ್ತರ ಕೊಡಬೇಕಷ್ಟೆ ಎಂದರು.

. ಇವತ್ತು ಅದೇ ಮುಂದುವರಿದ ಭಾಗವಾಗಿದೆ. ಕಾರ್ಯಕರ್ತರ ಭಾವನೆಗೆ ಸ್ಪಂಧಿಸುವುದು ನಾಯಕರ ಕರ್ತವ್ಯ. ಎಲ್ಲಿಯೋ ಸಣ್ಣ ವ್ಯವಸ್ಥೆಯ ತಪ್ಪಿನಿಂದಾಗಿ ಬೇರೆ ಬೇರೆ ವ್ಯವಸ್ಥೆಗಳು ನಡೆದಿದೆ. ಕಾರ್ಯಕರ್ತರ ಭಾವನೆಗಳಿಗೆ ಬೆಲೆಗಳನ್ನು ಕೊಡಬೇಕು ಎಂದ ಅರುಣ್ ಕುಮಾರ್ ಪುತ್ತಿಲ ಅವರು, ನಮ್ಮ ಪರಿವಾರದ ಜೊತೆಗೆ ಗುರುತಿಸಿಕೊಂಡ ಕಾರ್ಯಕರ್ತರಿಗೆ ಒಂದಾಗಬೇಕೆಂಬ ನಿಟ್ಟಿನಲ್ಲಿ ಪಕ್ಷದಲ್ಲಿ ಅವರಿಗೆ ಜವಾಬ್ದಾರಿಯನ್ನು ಕೊಟ್ಟಿರುವುದು ಆದರೆ ಇನ್ನೂ ಕಾರ್ಯಕರ್ತರಿಗೆ ಸ್ಪಂಧನೆ ಸಿಗುತ್ತಿಲ್ಲ ಎಂದರು. ಕಾರ್ಯಕರ್ತರು ಅಪೇಕ್ಷೆ ಮಾಡಿದರೆ ಪಕ್ಷದಲ್ಲಿ ಯಾವುದೇ ಬೆಳವಣಿಗೆ ಆಗಲು ಸಾಧ್ಯ ಅನ್ನುವಂತಹದ್ದನ್ನು ಅನೇಕ ಸಂದರ್ಭದಲ್ಲಿ ನೋಡಿದ್ದೇವೆ. ಅದಕ್ಕೆ ಜಾಸ್ತಿ ಹೇಳಬೇಕಾದ ಅವಶ್ಯಕತೆ ಇಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಅರುಣ್ ಕುಮಾ‌ರ್ ಪುತ್ತಿಲ 2028 ವಿಧಾನಸಭೆ ಚುನಾವಣೆಯ ಅಭಿಯಾನಕ್ಕೆ ಸಂಬಂಧಿಸಿ ಬಂದಿರುವ ಪೋಸ್ಟ್‌ಗಳ ಕುರಿತು ಉತ್ತರಿಸಿದರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಿಜೆಪಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ – ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಬಸ್ ಪ್ರಯಾಣದ ವೇಳೆ ಮಹಿಳೆಯ ಚಿನ್ನದ ಸರ ಕಳವು – ದೂರು ದಾಖಲು

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : 2017ರ ಲಾಠಿ ಚಾರ್ಜ್ ಪ್ರಕರಣ – ಎಲ್ಲಾ 101 ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ

⚠️ Contents are protected on this website.