ಪುತ್ತೂರು: ಆಟೋಗೆ ಕಾರು ಢಿಕ್ಕಿ; ಆಟೋ ಚಾಲಕ ಸೇರಿ ಐವರು ಮಕ್ಕಳಿಗೆ ಗಾಯ

Advertisement

ಪುತ್ತೂರು, ಮಾ. 10 : ಕಾರೊಂದು ಆಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ, ಒಂದೇ ಕುಟುಂಬದ ಐವರು ಮಕ್ಕಳು ಹಾಗೂ ಆಟೋ ಚಾಲಕರಾದ ಅವರ ತಂದೆ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿಯಲ್ಲಿ ಸೋಮವಾರ ಸಂಜೆ ನಡೆದಿದೆ.

Advertisement

ಗಾಯಾಳುಗಳನ್ನು ಆಟೋ ಚಾಲಕ ಕಲಂದರ್ ಶಾಫಿ ಮತ್ತು ಅವರ ಮಕ್ಕಳಾದ ಮಹಮ್ಮದ್ ಜಾಝೀರ್ (13), ಮಹಮ್ಮದ್ ಇರ್ಷಾದ್ (11), ಮಹಮ್ಮದ್ ರಾಝೀಕ್ (9), ಮಹಮ್ಮದ್ ನೂರ್ (5) ಮತ್ತು ಸಝ್ಮಾ (4) ಎಂದು ಗುರುತಿಸಲಾಗಿದೆ. ಇವರಲ್ಲಿ ಕಲಂದರ್ ಶಾಫಿ, ಸಝ್ಮಾ ಮತ್ತು ಮಹಮ್ಮದ್ ಜಾಝೀರ್ ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ಕಲಂದರ್ ಶಾಫಿ ಅವರು ಉಪ್ಪಿನಂಗಡಿಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಿಂದ ಮಕ್ಕಳನ್ನು ಕರೆದುಕೊಂಡು 34 ನೆಕ್ಕಿಲಾಡಿಯ ತಮ್ಮ ಮನೆಗೆ ತೆರಳುತ್ತಿದ್ದರು. ಈ ವೇಳೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಿಂದ ಉಪ್ಪಿನಂಗಡಿ ಕಡೆಗೆ ಅತೀ ವೇಗವಾಗಿ ಬಂದ ಕಾರು, ಸರ್ವಿಸ್ ರಸ್ತೆಗೆ ನುಗ್ಗಿ ಆಟೋ ರಿಕ್ಷಾಕ್ಕೆ ನೇರವಾಗಿ ಢಿಕ್ಕಿ ಹೊಡೆದಿದೆನ್ನಲಾಗಿದೆ.

ಢಿಕ್ಕಿಯ ರಭಸಕ್ಕೆ ಆಟೋ ರಿಕ್ಷಾ ರಸ್ತೆಯಲ್ಲೇ ಉರುಳಿ ಬಿದ್ದಿದ್ದು, ಒಳಗಿದ್ದ ಆರೂ ಮಂದಿಗೆ ಗಾಯಗಳಾಗಿವೆ. ಕಾರು ಚಾಲಕನ ನಿರ್ಲಕ್ಷ್ಯ ಹಾಗೂ ಅತಿ ವೇಗದ ಚಾಲನೆಯೇ ಈ ಅಪಘಾತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ