ಪುತ್ತೂರು : ಝೆರಾಕ್ಸ್ ಅಂಗಡಿ ಮಾಲಕಿ ಮೇಲೆ ಹಲ್ಲೆ – ಪುತ್ತೂರು ಬಂದ್ ಭಾಗಶ: ಯಶಸ್ವಿ, ಭಾರಿ ಭದ್ರತೆ !

Advertisement

ಪುತ್ತೂರು ಆ. 25 : ದರ್ಬೆಯಲ್ಲಿ ಝೆರಾಕ್ಸ್ ಅಂಗಡಿ ಮಾಲಕಿ ಮೇಲೆ ನಡೆದ ಹಲ್ಲೆ ಹಾಗೂ ಈ ಪ್ರಕರಣದಲ್ಲಿ ಪೊಲೀಸ್ ಇಲಾಖೆಯ ವೈಫಲ್ಯವನ್ನು ಖಂಡಿಸಿ ಇಂದು ಪುತ್ತೂರು ನಗರದಲ್ಲಿ ಸ್ವಯಂಪ್ರೇರಿತ ಬಂದ್‌ಗೆ ಕರೆ ನೀಡಲಾಗಿದೆ. ಪುತ್ತೂರಿನಲ್ಲಿ ಬಹುತೇಕ ಅಂಗಡಿಗಳು ಬಂದ್ ಆಗಿದ್ದು, ಭಾಗಶ: ಸ್ತಬ್ಧವಾಗಿದೆ.

Advertisement

ಹಿಂದೂ ಜಾಗರಣ ವೇದಿಕೆ ನೀಡಿದ ಈ ಸ್ವಯಂಪ್ರೇರಿತ ಬಂದ್ ಕರೆಗೆ ಬಿಜೆಪಿ, ವಿವಿಧ ಹಿಂದೂಪರ ಸಂಘಟನೆಗಳು ಹಾಗೂ ಬಿಎಂಎಸ್ ಆಟೋ ಯೂನಿಯನ್ ಬೆಂಬಲ ವ್ಯಕ್ತಪಡಿಸಿವೆ. ಪುತ್ತೂರು ನಗರದ ಹಲವು ವರ್ತಕರು ಅಂಗಡಿಗಳನ್ನು ಮುಚ್ಚಿ ಬೆಂಬಲ ಸೂಚಿಸಿದ್ದು, ಬೆರಳೆಣಿಕೆಯಷ್ಟೇ ಅಂಗಡಿಗಳು ತೆರೆದಿವೆ. ರಸ್ತೆಯಲ್ಲಿ ಆಟೋ ರಿಕ್ಷಾಗಳ ಸಂಚಾರ ಗಣನೀಯವಾಗಿ ಕಡಿಮೆಯಾಗಿದೆ.

Advertisement

ಬಂದ್ ಹಾಗೂ ಈದ್ ಮಿಲಾದ್ ಒಂದೇ ದಿನ ಬಂದಿರುವುದರಿಂದ ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮತ್ತು ಪರಿಸ್ಥಿತಿಯನ್ನು ನಿಯಂತ್ರಣದಲ್ಲಿಡಲು ಭಾರಿ ಭದ್ರತೆಯನ್ನು ಕೈಗೊಳ್ಳಲಾಗಿದೆ.


ಪೊಲೀಸ್ ಅಧಿಕಾರಿಗಳು: 1 ಹೆಚ್ಚುವರಿ ಎಸ್‌ಪಿ (Addl SP), 1 ಡಿವೈಎಸ್‌ಪಿ (DySP), 8 ಪಿಎಸ್‌ಐ (PSI), 10 ಎಎಸ್‌ಐ (ASI) ಹಾಗೂ 50 ಸಿಬ್ಬಂದಿ. ಹೆಚ್ಚುವರಿ ಪಡೆಗಳು: 5 ಕೆಎಸ್‌ಆರ್‌ಪಿ (KSRP) ತುಕಡಿ, 3 ಡಿಎಆರ್ (DAR) ತುಕಡಿ ಮತ್ತು 1 ಸ್ಪೆಷಲ್ ಆಕ್ಷನ್ ಫೋರ್ಸ್ (SAF) ತುಕಡಿಯನ್ನು ಸುರಕ್ಷತೆಗಾಗಿ ನಿಯೋಜಿಸಲಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ