ಪುತ್ತೂರು : ವಿಷ ಸೇವಿಸಿದ್ದ ಯುವತಿ ಚಿಕಿತ್ಸೆ ಫಲಿಸದೆ ಮೃತ್ಯು

Advertisement

ಪುತ್ತೂರು, ಜು. 19 : ವಿಷ ಸೇವಿಸಿ 27 ದಿನಗಳಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ‌ಚಿಕಿತ್ಸೆ ಪಡೆಯುತ್ತಿದ್ದ ಬೆಟ್ಟಂಪಾಡಿ ಗ್ರಾಮದ ಮಿತ್ತಡ್ಕ ನಿವಾಸಿ ಯುವತಿ ಜು. 17 ರಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ.

ಮಿತ್ತಡ್ಕ ನಿವಾಸಿ ಪ್ರಜ್ಞಾ (26) ಮೃತ ಯುವತಿ. ಆರೋಗ್ಯ ಇಲಾಖೆಯಲ್ಲಿ ‌ಸಮುದಾಯ ಆರೋಗ್ಯಾಧಿಕಾರಿಯಾಗಿ ಬಡಗನ್ನೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಆಕೆ ಜು.21ರಂದು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು.

ಗಂಭೀರ ಸ್ಥಿತಿಯಲ್ಲಿದ್ದ ಆಕೆಯನ್ನು ಚಿಕಿತ್ಸೆಗಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆದರೆ ಆಕೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ. ಆತ್ಮಹತ್ಯೆಗೆ ಯತ್ನಿಸುವುದಕ್ಕೆ ಕಾರಣ ತಿಳಿದುಬಂದಿಲ್ಲ.
ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ