ಬೆಂಗಳೂರು : ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ – 8 ಮಂದಿ ಬಂಧನ, ಶೇರ್ ಮಾಡಿದವರಿಗೂ ಕಂಟಕ !

ಬೆಂಗಳೂರು, ಜ. 12 : ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಕರು ವಿದ್ಯಾರ್ಥಿಗಳನ್ನು ಉತ್ತರ ವಿಭಾಗದ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

Advertisement

ಜನವರಿ 9 ರಂದು ಹಿಂದಿ ಪರೀಕ್ಷೆ ಇತ್ತು. ಆದರೆ ಜನವರಿ 8 ರಂದು ನಿರಂಜನ್ ಶೆಟ್ಟಿ ಹೆಸರಿನ ಯೂಟ್ಯೂಬ್‌ ಚಾನೆಲ್‌ನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಈ ಸಂಬಂಧ ಪದವಿ ಪೂರ್ವ ಇಲಾಖೆಯ ಜಂಟಿ ನಿರ್ದೇಶಕ ರಾಜು ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಉತ್ತರ ವಿಭಾಗದ ಸೈಬರ್ ಸೆನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.

ತನಿಖೆಗೆ ಇಳಿದ ಪೊಲೀಸರು ಹೆಡ್ ಮಾಸ್ಟರ್‌ಗಳು, ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳು ಸೇರಿ 8 ಮಂದಿಯನ್ನು ಬಂಧಿಸಿದ್ದಾರೆ. ತುಮಕೂರು, ರಾಮನಗರ, ಕಲಬುರಗಿ ಜಿಲ್ಲೆಯ ಹೆಡ್ ಮಾಸ್ಟರ್ ಹಾಗೂ ಶಿಕ್ಷಕರ ಬಂಧನವಾಗಿದೆ.
ಈಗ ಪೊಲೀಸರು ಪ್ರಶ್ನೆಪತ್ರಿಕೆಯನ್ನು ವೈರಲ್ ಮಾಡಿದವರ ವಾಟ್ಸಪ್‌, ಇನ್‌ಸ್ಟಾ, ಟೆಲಿಗ್ರಾಂ ಖಾತೆಯ ಜೊತೆ ಮೊಬೈಲ್ ಪರಿಶೀಲನೆ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಈ ಪ್ರಕರಣದಲ್ಲಿ ಮತ್ತಷ್ಟು ಮಂದಿ ಬಂಧನವಾಗುವ ಸಾಧ್ಯತೆಯಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಸಚಿವ ಸ್ಥಾನಕ್ಕಾಗಿ ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ 31 ಶಾಸಕರಿಂದ ಪತ್ರ – ಕೈ ಪಾಳಯದಲ್ಲಿ “ಪತ್ರ ಸ್ಫೋಟ”

ಟಾಪ್ ಸುದ್ದಿಗಳು, ರಾಜ್ಯ / ದೇಶ

ತಮಿಳುನಾಡು : ಎಐಎಡಿಎಂಕೆ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ 10,000 ರೂ. ಘೋಷಣೆ !

ವಿದೇಶ

ಅಮೆರಿಕದಲ್ಲಿ ಭಾರಿ ಹಿಮಪಾತ: 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು, ಶಾಲೆಗಳಿಗೆ ರಜೆ

⚠️ Contents are protected on this website.