ಮಂಗಳೂರು : ಕಾಂಗ್ರೆಸ್ನಿಂದ ಈಗಾಗಲೇ ಆಹ್ವಾನ ಬಂದಿದೆ ! 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ – ರಘುಪತಿ ಭಟ್

ಮಂಗಳೂರು, ಅ. 14 : 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸೇರ್ಪಡೆ ಕುರಿತು ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ ಎಂದು ಸ್ಪಷ್ಟಪಡಿಸಿದರು. ಕಾಂಗ್ರೆಸ್ನಿಂದ ಈಗಾಗಲೇ ಆಹ್ವಾನ ಬಂದಿದೆ. ಬಿಜೆಪಿ ಪಕ್ಷದವರು ಕರೆಯುತ್ತಾರೆ ಎಂದು ಕಾಯುತ್ತಿದ್ದೇನೆ. ನನ್ನ ಬೆಂಬಲಿಗರು ಹಾಗೂ ಹಿತೈಷಿಗಳ ಅಭಿಪ್ರಾಯ ಪಡೆದು ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದರು. ಬಾಲ್ಯದಿಂದಲೂ ಬಿಜೆಪಿಯೊಂದಿಗೆ ಗುರುತಿಸಿಕೊಂಡಿದ್ದು, ಮೂರು ಬಾರಿ ಶಾಸಕನಾಗಿ ಹಾಗೂ ಬಿಜೆಪಿ ಯುವ ಮೋರ್ಚಾ ಮತ್ತು ಜಿಲ್ಲಾಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಹೀಗಾಗಿ ಏಕಾಏಕಿ ಪಕ್ಷ ಬದಲಿಸುವ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ತಿಳಿಸಿದರು.

ವಿಧಾನ ಪರಿಷತ್ ಚುನಾವಣೆಯಲ್ಲಿ ಟಿಕೆಟ್ ನೀಡದೆ ಮೋಸ ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ತಮ್ಮೊಂದಿಗೆ ಗೌರವದಿಂದ ನಡೆದುಕೊಂಡಿದ್ದರೆ ಸಾಕಾಗುತ್ತಿತ್ತು ಎಂದು ಹೇಳಿದರು. 2028ರ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತವಾಗಿದ್ದು, ಯಾವ ಪಕ್ಷದಿಂದ ಸ್ಪರ್ಧಿಸಬೇಕು ಎಂಬುದನ್ನು ಬೆಂಬಲಿಗರೊಂದಿಗೆ ಚರ್ಚಿಸಿ ತೀರ್ಮಾನಿಸುವುದಾಗಿ ತಿಳಿಸಿದರು.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ವಿದೇಶ

ಜಪನ್ : ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ – ಪ್ಯಾರಾ ಈಜುಪಟು ಮೊಹಮ್ಮದ್ ಶಮ್ಸ್ ಜಪಾನ್‌ನಿಂದ ಗಡಿಪಾರು, ತಂಡಕ್ಕೆ ಮುಜುಗರ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಳಗಾವಿ : ಮನೆಯಲ್ಲಿ ವಿಜಯದಶಮಿ ಹಬ್ಬದ ಸಂಭ್ರಮದ ರಾತ್ರಿಯಂದು ಹರಿದಿತ್ತು ರಕ್ತ – ಹಬ್ಬದ ದಿನವೇ ಹೆಂಡತಿಗೆ ಚಟ್ಟ ಕಟ್ಟಿದ ಪತಿ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ನಾವೂರು ಕ್ಲಿನಿಕ್ ಗೆ ಬೆಂಕಿ ಪ್ರಕರಣದಲ್ಲಿ ಪ್ರಭಾವಿ ವ್ಯಕ್ತಿಗಳಿರುವ ಶಂಕೆಯಿದೆ – ಗ್ರಾಮಸ್ಥರು