ಬೆಳ್ತಂಗಡಿ : ರಾಜ ಕೇಸರಿ ಸೇವಾ ಟ್ರಸ್ಟ್ (ರಿ.) ಇದರ ವತಿಯಿಂದ ಆಯ್ದ ವಿದ್ಯಾರ್ಥಿಗಳಿಗೆ ಪುಸ್ತಕ, ಬ್ಯಾಗ್ ವಿತರಣಾ ಕಾರ್ಯಕ್ರಮ

ಬೆಳ್ತಂಗಡಿ, ಜು. 7 : ರಾಜ ಕೇಸರಿ ಸೇವಾ ಟ್ರಸ್ಟ್ (ರಿ.) ಬೆಳ್ತಂಗಡಿ ತಾಲೂಕು ಇದರ ವತಿಯಿಂದ ರಾಜ ಕೇಸರಿ ಸೇವಾ ಟ್ರಸ್ಟ್ (ರಿ.) ಕರ್ನಾಟಕ ಇದರ ಸಂಸ್ಥಾಪಕರಾದ ದೀಪಕ್ ಜಿ. ಬೆಳ್ತಂಗಡಿ ಇವರ ನೇತೃತ್ವದಲ್ಲಿ 586ನೇ ಸೇವಾ ಯೋಜನೆಯಾದ ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಯ ಆಯ್ದ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣಾ ಕಾರ್ಯಕ್ರಮವು ಜು. 12 ಭಾನುವಾರದಂದು ಕುತ್ಯಾರು ಹೊಸಮನೆ ಸಪರಿವಾರ ನಾಗಬ್ರಹ್ಮಾದಿ ಕ್ಷೇತ್ರ ರೆಂಕೆದಗುತ್ತು ಇಲ್ಲಿ ನಡೆಯಲಿದೆ.

Advertisement

ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಯ ಆಯ್ದ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣಾ ಕಾರ್ಯಕ್ರಮಕ್ಕೆ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಬೆಳ್ತಂಗಡಿ ಇದರ ಅಧ್ಯಕ್ಷರಾದ ಶ್ರೀ ಸಂಪತ್ ಬಿ ಸುವರ್ಣ ಉದ್ಘಾಟಿಸಲಿದ್ದಾರೆ. ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜಾ ಅವರು ಸಭಾಧ್ಯಕ್ಷತೆ ವಹಿಸಲಿದ್ದಾರೆ. ರಾಜ ಕೇಸರಿ ಸೇವಾ ಟ್ರಸ್ಟ್‌(ರಿ,). ಬೆಳ್ತಂಗಡಿ ತಾಲೂಕು ಇದರ ಅಧ್ಯಕ್ಷರಾದ ಶ್ರೀ ಜಗದೀಶ್ ಲಾಯಿಲ ಅಧ್ಯಕ್ಷತೆ ವಹಿಸಲಿದ್ದಾರೆ.

ಮೆಸ್ಕಾಂ ಮ೦ಗಳೂರು ಅಧ್ಯಕ್ಷರಾದ ಶ್ರೀ ಹರೀಶ್ ಕುಮಾರ್, ಬೆಳ್ತಂಗಡಿ ತಹಶಿಲ್ದಾರ್ ಶ್ರೀ ಪೃಥ್ವಿ ಸಾನಿಕಾಂ, ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆ ಪೋಲಿಸ್ ಉಪನಿರೀಕ್ಷಕರಾದ ಶ್ರೀ ಕಿಶೋರ್ ಪಿ, ಧಾರ್ಮಿಕ ಮುಖಂಡರಾದ ಶ್ರೀ ಕಿರಣ್ ಚಂದ್ರ ಡಿ ಪುಷ್ಪಗಿರಿ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿರಲಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

⚠️ Contents are protected on this website.