ಬೆಳ್ತಂಗಡಿ, ಜು. 12 : ರಾಜ ಕೇಸರಿ ಸೇವಾ ಟ್ರಸ್ಟ್ (ರಿ.) ಬೆಳ್ತಂಗಡಿ ತಾಲೂಕು ಇದರ ವತಿಯಿಂದ ರಾಜ ಕೇಸರಿ ಸೇವಾ ಟ್ರಸ್ಟ್ (ರಿ.) ಕರ್ನಾಟಕ ಇದರ ಸಂಸ್ಥಾಪಕರಾದ ದೀಪಕ್ ಜಿ. ಬೆಳ್ತಂಗಡಿ ಇವರ ನೇತೃತ್ವದಲ್ಲಿ 586ನೇ ಸೇವಾ ಯೋಜನೆಯಾದ ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಯ ಆಯ್ದ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣಾ ಕಾರ್ಯಕ್ರಮ ಇಂದು ಕುತ್ಯಾರು ಹೊಸಮನೆ ಸಪರಿವಾರ ನಾಗಬ್ರಹ್ಮಾದಿ ಕ್ಷೇತ್ರ ರೆಂಕೆದಗುತ್ತುವಿನಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಬೆಳ್ತಂಗಡಿ ಇದರ ಅಧ್ಯಕ್ಷರಾದ ಶ್ರೀ ಸಂಪತ್ ಬಿ ಸುವರ್ಣ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ರಾಜಕೇಸರಿ ಸೇವಾ ಟ್ರಸ್ಟ್ ಕಳೆದ ಹತ್ತು ಹಲವು ವರ್ಷಗಳಿಂದ ನಿರಂತರವಾಗಿ ಸೇವಾ ಕಾರ್ಯವನ್ನು ನಡೆಸಿಕೊಂಡು ಬರುತ್ತಿದೆ. ಟ್ರಸ್ಟ್ ನಲ್ಲಿ ಕೂಲಿ ಕಾರ್ಮಿಕರೇ ಇದ್ದರೂ ಕೂಡಾ ಎಂದಿಗೂ ತಮ್ಮ ಸೇವಾ ಕಾರ್ಯವನ್ನು ನಿಲ್ಲಿಸಿಲ್ಲ. ಇಂದು ಭವಿಷ್ಯದ ಪ್ರಜೆಗಳ ಭವಿಷ್ಯವನ್ನು ಬರೆಯಬಲ್ಲಂತಹ ಶಿಕ್ಷಣದ ಬೆಂಬಲಕ್ಕಾಗಿ ಪುಸ್ತಕ ಹಾಗೂ ಬ್ಯಾಗ್ ವಿತರಣೆ ನಡೆಸಿರುವುದು ಅತ್ಯಂತ ಸಂತಸ ತಂದಿದೆ. ವಿದ್ಯಾರ್ಥಿ ಪೋಷಕರೂ ಕೂಡಾ ತಮ್ಮ ವಿದ್ಯಾರ್ಥಿಗಳನ್ನು ಭವಿಷ್ಯದ ಸತ್ಪ್ರಜೆಗಳನ್ನಾಗಿ ರೂಪಿಸಬೇಕಿದೆ ಎಂದು ಹೇಳಿದರು.
ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿಣಿ ಸಿ.ಕೆ ಅವರು ಮಾತನಾಡಿ, ಬಹಳ ಕಷ್ಟದ ದಿನಗಳನ್ನು ಎದುರಿಸುತ್ತಿರುವವ ಬದುಕಿನಲ್ಲಿ ರಾಜ ಕೇಸರಿ ಸೇವಾ ಟ್ರಸ್ಟ್ ಬೆಂಬಲವಾಗಿ ನಿಲ್ಲುತ್ತಿದೆ. ನಾನು ಬೆಳ್ತಂಗಡಿಗೆ ಬಂದು ಕೆಲವೇ ದಿನಗಳಾದರೂ ಕೂಡಾ ನನಗೆ ರಾಜ ಕೇಸರಿ ಸೇವಾ ಟ್ರಸ್ಟ್ ಚಿರಪರಿಚಿತವಾಗಿದೆ ಅಷ್ಟರ ಮಟ್ಟಿಗೆ ಸೇವಾ ಕಾರ್ಯಗಳನ್ನು ನಡೆಸುತ್ತಿದೆ. ಮಕ್ಕಳ ಪೋಷಕರು ತಮ್ಮ ಮಕ್ಕಳಿಗಾಗಿ ಆಸ್ತಿಗಳನ್ನು ಮಾಡದೆ, ಮಕ್ಕಳನ್ನೇ ಆಸ್ತಿವಂತರನ್ನಾಗಿ ಬೆಳೆಸಬೇಕಿದೆ ಎಂದರು.
ಇನ್ನು, ಧಾರ್ಮಿಕ ಮುಖಂಡರಾದ ಕಿರಣ್ ಚಂದ್ರ ಡಿ. ಪುಷ್ಪಗಿರಿ, ಹಳ್ಳಿಮನೆ ಉಜಿರೆ ಮಾಲಕರಾದ ಪ್ರವೀಣ್ ಫೆರ್ನಾಂಡಿಸ್, ಕಾರ್ಯನಿರತ ಪತ್ರಕರ್ತರ ಸಂಘ ಬೆಳ್ತಂಗಡಿ ಇದರ ಅಧ್ಯಕ್ಷರಾದ ತುಕರಾಮ್ ಬಿ., ವಿಜಯವಾಣಿ ಪತ್ರಿಕೆ ವರದಿಗಾರರಾದ ಮನೋಹರ್ ಬಳಂಜ, ಸಂಗಮ್ ಸ್ಟೋರ್ ರೆಂಕೆದಗುತ್ತು ಇದರ ಮಾಲಕರಾದ ಸಿರಿಲ್ ಡಿ’ಸೋಜಾ ಅವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ವೇದಿಕೆಯಲ್ಲಿ ರಾಜ ಕೇಸರಿ ಸೇವಾ ಟ್ರಸ್ಟ್ (ರಿ.) ಬೆಳ್ತಂಗಡಿ ತಾಲೂಕು ಅಧ್ಯಕ್ಷರಾದ ಜಗದೀಶ್ ಲಾಯಿಲ, ಜ್ಯೂಸ್ ಜಂಕ್ಷನ್ ಬೆಳ್ತಂಗಡಿ ದಿನೇಶ್ ಶೆಟ್ಟಿ, ರಾಜ ಕೇಸರಿ ಸೇವಾ ಟ್ರಸ್ಟ್ (ರಿ.) ಬೆಳ್ತಂಗಡಿ ತಾಲೂಕು ಪ್ರಧಾನ ಕಾರ್ಯದರ್ಶಿಯಾದ ಶರತ್ ಕರಾಯ ಉಪಸ್ಥಿತರಿದ್ದರು.
350 ಮಕ್ಕಳಿಗೆ ಪುಸ್ತಕ, ಬ್ಯಾಗ್ ವಿತರಣೆ
ರಾಜ ಕೇಸರಿ ಸೇವಾ ಟ್ರಸ್ಟ್ (ರಿ.) ಬೆಳ್ತಂಗಡಿ ತಾಲೂಕು ಇದರ ವತಿಯಿಂದ ರಾಜ ಕೇಸರಿ ಸೇವಾ ಟ್ರಸ್ಟ್ (ರಿ.) ಕರ್ನಾಟಕ ಇದರ ಸಂಸ್ಥಾಪಕರಾದ ದೀಪಕ್ ಜಿ. ಬೆಳ್ತಂಗಡಿ ಇವರ ನೇತೃತ್ವದಲ್ಲಿ 586ನೇ ಸೇವಾ ಯೋಜನೆಯಾಗಿ ತಾಲೂಕಿನ ಸರ್ಕಾರಿ ಶಾಲೆಯ ಆಯ್ದ 350 ಮಕ್ಕಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ ನಡೆಸಲಾಗಿದೆ.



