ಬೆಳ್ತಂಗಡಿ, ಜು. 20 : ಕರಾವಳಿ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗದ ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರಿಗೆ ರಾಜಕೇಸರಿ ಸೇವಾ ಟ್ರಸ್ಟ್ (ರಿ.) ಕರ್ನಾಟಕ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಕಳೆದ ಹತ್ತು ವರ್ಷಗಳಿಂದ ಶಾಸಕ ಹರೀಶ್ ಪೂಂಜಾ’ರವರು ರಾಜಕೇಸರಿ ಸೇವಾ ಟ್ರಸ್ಟ್ (ರಿ.) ಕರ್ನಾಟಕದ ಪ್ರತಿಯೊಂದು ಸೇವಾ ಕಾರ್ಯಗಳಿಗೆ ಬಹುದೊಡ್ಡ ಕೊಡುಗೆಯನ್ನು ನೀಡಿದ್ದಾರೆ ಎಂದು ಸಂಸ್ಥಾಪಕರಾದ ಶ್ರೀ ದೀಪಕ್ ಜಿ. ಬೆಳ್ತಂಗಡಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ರಾಜಕೇಸರಿ ಸೇವಾ ಟ್ರಸ್ಟ್ (ರಿ.) ಕರ್ನಾಟಕ ಇದರ ಸಂಸ್ಥಾಪಕರಾದ ಶ್ರೀ ದೀಪಕ್ ಜಿ. ಬೆಳ್ತಂಗಡಿ, ರಾಜಕೇಸರಿ ಸೇವಾ ಟ್ರಸ್ಟ್ (ರಿ.) ಬೆಳ್ತಂಗಡಿ ಅಧ್ಯಕ್ಷರಾದ ಜಗದೀಶ್ ಲಾಯಿಲ, ಸಂಘಟನಾ ಕಾರ್ಯದರ್ಶಿ ದೇವರಾಜ್ ಪೂಜಾರಿ ಹಾಗೂ ಮತ್ತಿತ್ತರರು ಉಪಸ್ಥಿತರಿದ್ದರು.


