ಬೆಳ್ತಂಗಡಿ : ಅಪಘಾತದಲ್ಲಿ ಗಂಭೀರ ಗಾಯಗೊಂಡ ಮಂಚ ಗುರಿಪಳ್ಳ ಇವರಿಗೆ ವಾಟರ್ ಬೆಡ್ ಹಸ್ತಾಂತರ

ಗುರಿಪಳ್ಳ, ಜ. 19 : ಅಪಘಾತದಿಂದ ಗಂಭೀರ ಗಾಯಗೊಂಡು ಹಾಸಿಗೆ ಹಿಡಿದಿರುವ ಗುರಿಪಳ್ಳ ನಿವಾಸಿ ಮಂಚ ಮುಗೇರ ಇವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ಮಾಡಿ ಆರೋಗ್ಯ ವಿಚಾರಿಸಿ, ವಾಟರ್ ಬೆಡ್ ಹಸ್ತಾಂತರಿಸಿದ್ದಾರೆ. ಮಂಚ ಮುಗೇರ ಇವರು ಉಜಿರೆಯಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭ ಬಸ್ ಢಿಕ್ಕಿಯಾಗಿ, ತಲೆಗೆ ಗಂಭೀರ ಗಾಯವುಂಟಾಗಿತ್ತು. ಅವರನ್ನು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಇದೀಗ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement

ಬೆಳ್ತಂಗಡಿ ಆಸ್ಪತ್ರೆಗೆ ಭೇಟಿ ನೀಡಿದ ರಕ್ಷಿತ್ ಶಿವರಾಂ ವೈದ್ಯರಿಂದ ರೋಗಿಯ ಆರೋಗ್ಯದ ಬಗ್ಗೆ ವಿಚಾರಿಸಿ ಮಾಹಿತಿ ಪಡೆದುಕೊಂಡರು. ಈ ಸಂಧರ್ಭದಲ್ಲಿ ಪತ್ನಿ ಗಿರಿಜಾ, ಮಗ ಶ್ರೀ ಲೋಕನಾಥೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯ ನಾಗೇಶ್ ಎಂ., ಯುವ ವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ, ಕುಟುಂಬ ಸದಸ್ಯರಾದ ಪ್ರವೀಣ, ಹರೀಶ್, ಸರಸ್ವತಿ ಜಗದೀಶ್, ಪ್ರಮುಖರಾದ ಬೆಳ್ತಂಗಡಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ಸೌಮ್ಯ ಲಾಯಿಲ, ಗ್ರಾಮೀಣ ಬ್ಲಾಕ್ ಕಿಸಾನ್ ಘಟಕದ ಅಧ್ಯಕ್ಷರಾದ ಯಶೋದರ ಗೌಡ ಕೊಡ್ಡೋಳು, ಕೇಶವ ಎಂ. ಉಪಸ್ಥಿತರಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.