ಬೆಳ್ತಂಗಡಿ : ಸತ್ಯದ ಮುಂದೆ ತಲೆಬಾಗಿದ ಕೇಂದ್ರ ಸರ್ಕಾರ – ರಕ್ಷಿತ್ ಶಿವರಾಂ

ಬೆಳ್ತಂಗಡಿ, ಜು. 25 : ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ನಡೆದ ನಿರ್ಲಕ್ಷ್ಯ ಮತ್ತು ನೀಟ್ ಪರೀಕ್ಷೆಯ ಅಕ್ರಮಗಳ ವಿರುದ್ಧ ದೇಶಾದ್ಯಂತ ವ್ಯಕ್ತವಾದ ಆಕ್ರೋಶದ ಫಲವಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರು ರಾಜೀನಾಮೆ ನೀಡಿರುವುದು ಪ್ರಜಾಪ್ರಭುತ್ವದ ಗೆಲುವಾಗಿದೆ. ಆದರೆ ರಾಜೀನಾಮೆಯೊಂದಿಗೆ ವಿಷಯ ಮುಗಿಯುವುದಿಲ್ಲ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ಅಗತ್ಯ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತಿಳಿಸಿದ್ದಾರೆ.

Advertisement

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ದೇಶದ ಕೋಟ್ಯಂತರ ವಿದ್ಯಾರ್ಥಿಗಳ ಹೋರಾಟಕ್ಕೆ ಹಾಗೂ ಸತ್ಯದ ಪರ ನಡೆದ ಜನಾಂದೋಲನಕ್ಕೆ ಸಂದ ಜಯವಾಗಿದೆ ಎಂದರು.

ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ವ್ಯವಸ್ಥೆಯ ಮೇಲಿನ ವಿಶ್ವಾಸಕ್ಕೆ ಧಕ್ಕೆಯಾದ ಘಟನೆಗಳ ಹಿನ್ನೆಲೆಯಲ್ಲಿ ದೇಶದಾದ್ಯಂತ ವಿದ್ಯಾರ್ಥಿಗಳು, ಪೋಷಕರು ಮತ್ತು ವಿವಿಧ ಸಂಘಟನೆಗಳು ಕೇಂದ್ರ ಸರ್ಕಾರದ ವಿರುದ್ಧ ಧ್ವನಿ ಎತ್ತಿದ್ದರು. ತಡವಾದರೂ ನೈತಿಕ ಹೊಣೆ ಹೊತ್ತು ಸಚಿವರು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದೆ.

ಆದರೆ ಕೇವಲ ರಾಜೀನಾಮೆ ನೀಡುವುದರಿಂದ ವಿಷಯ ಮುಕ್ತಾಯವಾಗುವುದಿಲ್ಲ. ನೀಟ್ ಪರೀಕ್ಷೆಯ ಅಕ್ರಮಗಳ ಬಗ್ಗೆ ಸಮಗ್ರ ಮತ್ತು ಪಾರದರ್ಶಕ ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳು, ಮಧ್ಯವರ್ತಿಗಳು ಹಾಗೂ ಈ ಹಗರಣದಲ್ಲಿ ಭಾಗಿಯಾದ ಎಲ್ಲರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಶಿಕ್ಷಣ ವ್ಯವಸ್ಥೆಯಲ್ಲಿ ಮೂಲಭೂತ ಸುಧಾರಣೆಗಳನ್ನು ಜಾರಿಗೆ ತರಬೇಕು.

ವಿದ್ಯಾರ್ಥಿಗಳ ಭವಿಷ್ಯ ಯಾವುದೇ ಸರ್ಕಾರದ ನಿರ್ಲಕ್ಷ್ಯಕ್ಕೆ ಬಲಿಯಾಗಬಾರದು. ಶಿಕ್ಷಣ ಕ್ಷೇತ್ರದಲ್ಲಿ ಪಾರದರ್ಶಕತೆ, ಪ್ರಾಮಾಣಿಕತೆ ಹಾಗೂ ವಿಶ್ವಾಸವನ್ನು ಮರುಸ್ಥಾಪಿಸುವ ಜವಾಬ್ದಾರಿ ಕೇಂದ್ರ ಸರ್ಕಾರದ ಮೇಲಿದೆ ಎಂದು ರಕ್ಷಿತ್ ಶಿವರಾಂ ಒತ್ತಾಯಿಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಕೃಷಿಕ ಕೃಷ್ಣಪ್ಪ ಕುಲಾಲ್ ಅಂತ್ಯಕ್ರಿಯೆಯಲ್ಲಿ ಪರಿಸರ ಕಾಳಜಿ – ಮೃತ ಪ್ರಕೃತಿ ಪ್ರೀತಿ ಜೀವಂತವಾಗಿರಿಸಲು ಗಿಡ ವಿತರಣೆ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಪ್ರಧಾನಿಯವರ ಪೋಸ್ಟ್‌ಗೆ ನಿರ್ಬಂಧ ವಿವಾದ – ಫೇಸ್‌ಬುಕ್ ವಿರುದ್ಧ ಬಿಜೆಪಿ ಆಕ್ರೋಶ !

⚠️ Contents are protected on this website.