ಬೆಳ್ತಂಗಡಿ : ವಿಷ ಸೇವಿಸಿದ್ದ ಪದವಿ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ, ಏ. 30 : ಪ್ರೇಮ ಪ್ರಕರಣದಲ್ಲಿ ಭಯಗೊಂಡು ಇಲಿಪಾಷಣ ತೆಗೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮಾಯದ ಬಾಳೆಮಂಡಿಕಲ್ಲು ನಿವಾಸಿ ದಿನೇಶ್ ನಾಯ್ಕ ಮತ್ತು ರೇವತಿ ದಂಪತಿಗಳ ಎರಡನೇ ಪುತ್ರಿ ರಮ (19) ಎಂಬಾಕೆ ಕಳೆದ ಎ.25 ರಂದು ರಾತ್ರಿ ಮನೆಯಲ್ಲಿ ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಬಳಿಕ ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತಿತ್ತು, ಆದ್ರೆ ಚಿಕಿತ್ಸೆ ಫಲಿಸದೆ ರಮ ಎ.29 ರಂದು ರಾತ್ರಿ 12 ಗಂಟೆಗೆ ಸಾವನ್ನಪ್ಪಿದ್ದಾಳೆ.

ರಮ ವಾಮದಪದವು ಕಾಲೇಜ್ ನಲ್ಲಿ ಎರಡನೇ ವರ್ಷದ ಪದವಿ ವಿದ್ಯಾರ್ಥಿನಿಯಾಗಿದ್ದಳು. ಯುವಕನೊಬ್ಬನ ಜೊತೆ ಪ್ರೀತಿ ಮಾಡುತ್ತಿದ್ದಳು. ಈ ವಿಚಾರ ಎರಡು ಮನೆಯವರಿಗೂ ತಿಳಿದು ಒಪ್ಪಿಗೆ ಸೂಚಿಸಿದ್ದರು. ರಮಾ ತಂದೆ ಕಾಲೇಜ್ ಮುಗಿಯುವ ಒಂದು ವರ್ಷದ ಬಳಿಕ ಮದುವೆ ಮಾಡಿಕೊಡುವುದಾಗಿ ತಿಳಿಸಿದ್ದರು. ಆದ್ರೆ ರಮಾ ಮುಂದಕ್ಕೆ ತಂದೆ ಮದುವೆ ಮಾಡದೆ ಇದ್ರೆ ಎಂದು ಭಯಗೊಂಡು ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಎ.30 ರಂದು ಆತ್ಮಹತ್ಯೆ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.