ವೇಣೂರು : 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಬಲತ್ಕಾರದ ಅತ್ಯಾಚಾರ – ಅಮ್ಮತ್ ಖಾನ್ ವಿರುದ್ಧ ಪ್ರಕರಣ ದಾಖಲು

ವೇಣೂರು : 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಬಲತ್ಕಾರವಾಗಿ ಅತ್ಯಾಚಾರ ನಡೆಸಿ, ಬಾಲಕಿಯನ್ನು ಗರ್ಭಿಣಿಯಾಗಿಸಿದ ಬಗ್ಗೆ ಬಾಲಕಿ ನೀಡಿದ ದೂರಿನಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Advertisement

ನೊಂದ ಬಾಲಕಿ ವೇಣೂರು ಠಾಣಾ ವ್ಯಾಪ್ತಿಯಲ್ಲಿರುವ ತನ್ನ ಸಂಬಂಧಿಕರ ಮನೆಗೆ ಬಂದಿರುವ ವೇಳೆ ಅಲ್ಲಿದ್ದ ನೊಂದ ಬಾಲಕಿಯ ಅತ್ತೆಯ ಮಗ ಬಾಲಕಿಯನ್ನು ಪ್ರೀತಿಸುತ್ತಿದ್ದು, ಮದುವೆಯಾಗುವುದಾಗಿ ನಂಬಿಸಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಒತ್ತಾಯಪೂರ್ವಕವಾಗಿ ಲೈಂಗಿಕ ಸಂಪರ್ಕ ಮಾಡಿದ್ದಾನೆ. ಇದಾದ ಬಳಿಕ ನಿರಂತರವಾಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

Advertisement

ಬಾಲಕಿ ಅನಾರೋಗ್ಯದ ಕಾರಣ ವೇಣೂರು ಸರಕಾರಿ ಆಸ್ಪತ್ರೆಗೆ ಬಂದ ವೇಳೆ ಬಾಲಕಿ ಗರ್ಭಿಣಿಯಾಗಿರುವುದು ತಿಳಿದು ಬಂದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಬಗ್ಗೆ ಬಾಲಕಿ ವೇಣೂರು ಪೊಲೀಸರಿಗೆ ದೂರು ನೀಡಿದ್ದು, ಅದರಂತೆ ಆರೋಪಿ ಅಮ್ಮತ್ ಖಾನ್ (18ವ) ವಿರುದ್ಧ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಕರಾವಳಿ, ಟಾಪ್ ಸುದ್ದಿಗಳು

ಉಡುಪಿ : ಕಾಂಗ್ರೆಸ್ ಮುಖಂಡ ಡೇವಿಡ್ ಶೂಟೌಟ್ ಪ್ರಕರಣ – ಆರೋಪಿ ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಪುತ್ತೂರು, ಬೆಳ್ತಂಗಡಿ, ಸುಳ್ಯ  ಕಡಬ  ತಾಲೂಕಿನ ಎಲ್ಲಾ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಸಾಲ ವಸೂಲಿಗೆ ಆರ್‌ಬಿಐ ಹೊಸ ರೂಲ್ಸ್ – ರಿಕವರಿ ಏಜೆಂಟ್‌ಗಳು ಬೇಕಾಬಿಟ್ಟಿ ಸಾಲಗಾರರ ಮನೆಗೆ ಬರುವಂತಿಲ್ಲ !

⚠️ Contents are protected on this website.