ಮೂಡುಬಿದಿರೆ : ರಸ್ತೆ ಬದಿ ಕಸ ಸುರಿಯುತ್ತಿದ್ದ ವಾಹನ ಮಾಲಕನಿಗೆ ದಂಡ

Advertisement

ಮೂಡುಬಿದಿರೆ, ಜು. 23 : ರಸ್ತೆ ಬದಿಯಲ್ಲಿ ಅಕ್ರಮವಾಗಿ ಕಸ ಸುರಿಯುತ್ತಿದ್ದ ವಾಹನದ ಮಾಲಕನಿಗೆ ಮೂಡುಬಿದಿರೆಯ ಹೊಸಬೆಟ್ಟು ಗ್ರಾಮ ಪಂಚಾಯತ್ 1,500 ರೂ. ದಂಡ ವಿಧಿಸಿದೆ.

Advertisement

ಹೊಸಬೆಟ್ಟು ಗ್ರಾಮ ಪಂಚಾಯತ್ ಸ್ವಚ್ಛತೆ ಕಾಪಾಡುವ ಉದ್ದೇಶದಿಂದ ಜಿಲ್ಲಾ ಪಂಚಾಯತ್ ಅಧಿಕಾರಿಗಳೊಂದಿಗೆ ಪಂಚಾಯತ್ ಪಿಡಿಓ ಸವಿತಾ ಅವರು ಸ್ಥಳ ಪರಿಶೀಲನೆ ನಡೆಸಿದ ವೇಳೆ ರಸ್ತೆ ಬದಿಯಲ್ಲಿ ಕಸ ಸುರಿಯುತ್ತಿರುವುದು ಕಂಡು ಬಂದಿದೆ. ತಕ್ಷಣವೇ ಟೆಂಪೋ ಮಾಲಕನ ವಿರುದ್ಧ ಕ್ರಮ ಕೈಗೊಂಡು 1,500 ರೂ. ದಂಡ ವಿಧಿಸಿ ಎಚ್ಚರಿಕೆಯನ್ನು ನೀಡಿದ್ದಾರೆ.

Advertisement

ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಸುರಿಯದೇ, ನಿಗದಿತ ಸ್ಥಳದಲ್ಲೇ ತ್ಯಾಜ್ಯ ವಿಲೇವಾರಿ ಮಾಡುವಂತೆ ಪಂಚಾಯತ್ ಮನವಿ ಮಾಡಿದೆ. ಇಂತಹ ಉಲ್ಲಂಘನೆಗಳು ಮುಂದುವರಿದರೆ ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿ ಗಳು ಎಚ್ಚರಿಕೆ ನೀಡಿದ್ದಾರೆ. ಈ‌ ಸಂದಭ೯ ಗ್ರಾಮ ನೈರ್ಮಲ್ಯ ಸದಸ್ಯರು, ಸಾರ್ವಜನಿಕರು ಸಹಕಾರ ನೀಡಿದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ