ರಿಯಾದ್‌ : ಅಮೆರಿಕ ರಾಯಭಾರ ಕಚೇರಿಯ ಮೇಲೆ ಮುಂಜಾನೆ ಇರಾನ್ ಅವಳಿ ಡ್ರೋನ್ ದಾಳಿ – ಎಚ್ಚರಿಕೆ ನೀಡಿದ ಟ್ರಂಪ್ !

Advertisement

ರಿಯಾದ್‌, ಮಾ. 03 : ಸೌದಿ ಅರೇಬಿಯಾದ ರಾಜಧಾನಿ ರಿಯಾದ್‌ನಲ್ಲಿರುವ ಅಮೆರಿಕ ರಾಯಭಾರ ಕಚೇರಿಯ ಮೇಲೆ ಇಂದು (ಮಾರ್ಚ್ 3, 2026) ಮುಂಜಾನೆ ಇರಾನ್ ಅವಳಿ ಡ್ರೋನ್ ದಾಳಿ ನಡೆಸಿದೆ. ಈ ದಾಳಿಯಿಂದಾಗಿ ರಾಯಭಾರ ಕಚೇರಿಯ ಆವರಣದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಆಕಾಶದತ್ತ ಕಪ್ಪು ಹೊಗೆ ಚಿಮ್ಮುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

Advertisement

ಸೌದಿ ರಕ್ಷಣಾ ಸಚಿವಾಲಯದ ಮಾಹಿತಿ ಪ್ರಕಾರ, ಎರಡು ಡ್ರೋನ್ ಗಳು ನೇರವಾಗಿ ರಾಯಭಾರ ಕಚೇರಿಯನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿವೆ. ರಿಯಾದ್‌ನ ಡಿಪ್ಲೊಮ್ಯಾಟಿಕ್ ಕ್ವಾರ್ಟ‌್ರನಲ್ಲಿ ಭಾರಿ ಸ್ಫೋಟದ ಸದ್ದು ಕೇಳಿಬಂದಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ದಾಳಿಯಿಂದಾಗಿ ಕಚೇರಿಯ ಛಾವಣಿ ಮತ್ತು ಆವರಣದ ಗೋಡೆಗಳಿಗೆ ಭಾಗಶಃ ಹಾನಿಯಾಗಿದೆ. ಅದೃಷ್ಟವಶಾತ್, ಈವರೆಗೆ ಯಾವುದೇ ಪ್ರಾಣಾಪಾಯ ಅಥವಾ ಗಂಭೀರ ಗಾಯಗಳಾದ ಬಗ್ಗೆ ವರದಿಯಾಗಿಲ್ಲ. ಇತ್ತೀಚೆಗೆ ಇರಾನ್‌ನಲ್ಲಿ ನಡೆದ ದಾಳಿಗಳಿಗೆ ಪ್ರತಿಕಾರವಾಗಿ ಇರಾನ್ ಬೆಂಬಲಿತ ಗುಂಪುಗಳು ಈ ಕೃತ್ಯ ಎಸಗಿರಬಹುದು ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ.

Advertisement

ಈ ದಾಳಿಯ ನಂತರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು “ನಮ್ಮ ರಾಯಭಾರಿ ಕಚೇರಿಯ ಮೇಲಿನ ದಾಳಿಯನ್ನು ನಾವು ಸಹಿಸುವುದಿಲ್ಲ. ಇದಕ್ಕೆ ಅಮೆರಿಕ ಯಾವ ರೀತಿ ತಿರುಗೇಟು ನೀಡಲಿದೆ ಎಂಬುದು ನಿಮಗೆ ಶೀಘ್ರದಲ್ಲೇ ತಿಳಿಯಲಿದೆ ಎಂದು ಹೇಳಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ