ಬೆಳ್ತಂಗಡಿ : ಮಹಮ್ಮದ್ ರಿಯಾಜ್ ಫರಂಗಿಪೇಟೆಗೆ ಶಿಕ್ಷೆ ವಿಧಿಸಿದ ಬೆಳ್ತಂಗಡಿ ನ್ಯಾಯಾಲಯ

Advertisement

ಬೆಳ್ತಂಗಡಿ, ಆ. 04 : 2015 ರಲ್ಲಿ ಬೆಳ್ತಂಗಡಿ ತಾಲೂಕು ಕಛೇರಿ ಬಳಿ, ಪಾಪ್ಯುಲ್ಲ‌ರ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ವಲಯ ಎಂಬ ಸಂಘಟನೆಯ ವತಿಯಿಂದ ನಡೆಯುತ್ತಿದ್ದ ಪ್ರತಿಭಟನಾ ಸಭೆಯಲ್ಲಿ, ಧಾರ್ಮಿಕ ಭಾವನೆಗೆ ಧಕ್ಕೆಯಾಗುವಂತೆ ಪ್ರಚೋದನಾಕಾರಿಯಾಗಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ, ಮಹಮ್ಮದ್ ರಿಯಾಜ್ ಫರಂಗಿಪೇಟೆ ಎಂಬವರ ವಿರುದ್ದ ಆರೋಪ ಸಾಬೀತಾಗಿದ್ದು ಆರೋಪಿಗೆ 6 ತಿಂಗಳ ಸಾದಾ ಕಾರಗೃಹ ವಾಸ ಮತ್ತು 10,000 ದಂಡ ವಿಧಿಸಿ ಮಾನ್ಯ ಪ್ರಿನ್ಸಿಪಲ್ ಸಿ ಜೆ & ಜೆ ಎಮ್ ಎಫ್ ಸಿ ನ್ಯಾಯಾಲಯ, ಬೆಳ್ತಂಗಡಿ ಅದೇಶ ನೀಡಿದೆ.

ದಿನಾಂಕ: 23-07-2015 ರಂದು ಬೆಳ್ತಂಗಡಿ ತಾಲೂಕು ಕಛೇರಿ ಬಳಿ, ಪಾಪ್ಯುಲ್ಲರ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ನಡೆದ ಪ್ರತಿಭಟನಾ ಸಭೆಯಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆಯಾಗುವಂತೆ ಪ್ರಚೋದನಾಕಾರಿಯಾಗಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ, ಮಹಮ್ಮದ್ ರಿಯಾಜ್ ಫರಂಗಿಪೇಟೆ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸದ್ರಿ ಪ್ರಕರಣದ ತನಿಖೆ ನಡೆಸಿದ ಅಂದಿನ ಬೆಳ್ತಂಗಡಿ ಠಾಣಾ ಪೊಲೀಸ್ ಉಪನಿರೀಕ್ಷಕರು ಹಾಗೂ ಸದ್ರಿ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ರವಿ ಬಿ.ಎಸ್ ರವರು ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ ಮಾನ್ಯ ನ್ಯಾಯಾಲಯಕ್ಕೆ ದೊಷಾರೊಪಣಾ ಪಟ್ಟಿ ಸಲ್ಲಿಸಿದ್ದು, ನ್ಯಾಯಾಲಯದಲ್ಲಿ ವಿಚಾರಣೆ ನಡೆದು, ಆರೋಪಿತನ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಮಾನ್ಯ ನ್ಯಾಯಾಧೀಶರಾದ ರಾಮಲಿಂಗಪ್ಪರವರು ಆರೋಪಿಗೆ ಕಲಂ : 153(A) ಅಡಿಯಲ್ಲಿ 6 ತಿಂಗಳ ಸಾದಾ ಕಾರಗೃಹ ವಾಸ ಮತ್ತು 10,000 ದಂಡ ವಿಧಿಸಿ ಅದೇಶ ನೀಡಿದೆ. ಸರಕಾರಿ ಅಭಿಯೋಜಕರಾದ ಶ್ರೀಮತಿ ಆಶೀತರವರು ಸಮರ್ಥವಾಗಿ ವಾದಮಂಡನೆ ನಡೆಸಿರುತ್ತಾರೆ.

Advertisement
Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ