ಕಲ್ಮಂಜ : 2 ಸೇತುವೆಗಳು ಕಾಮಗಾರಿ ಹಿನ್ನಲೆ : ಮುಂಡಾಜೆ – ಧರ್ಮಸ್ಥಳ ರಸ್ತೆ ಸಂಚಾರ ಸ್ಥಗಿತ !

ಕಲ್ಮಂಜ, ಜೂ. 11 : ಮುಂಡಾಜೆಯಿಂದ ಧರ್ಮಸ್ಥಳ ಸಂಪರ್ಕಿಸುವ ರಸ್ತೆಯಲ್ಲಿ ಸೇತುವೆ ಕಾಮಗಾರಿ ನಡೆಯುತ್ತಿರುವ ಹಿನ್ನಲೆಯಲ್ಲಿ ವಾಹನಗಳ ಸಂಚಾರ ಸ್ಥಗಿತಗೊಳಿಸಿ, ಬ್ಯಾನರ್ ಅಳವಡಿಸಲಾಗಿದೆ.

Advertisement

ಮುಂಡಾಜೆಯಿಂದ ಧರ್ಮಸ್ಥಳ ಸಂಪರ್ಕಿಸುವ ರಸ್ತೆಯ ಪಿಲತ್ತಡ್ಕ ಹಾಗೂ ಒಂಜರೆಬೈಲು ಎಂಬಲ್ಲಿ ಸೇತುವೆಗಳು ನಿರ್ಮಾಣ ಹಂತದಲ್ಲಿದ್ದು, ಭಾಗಶ: ಕಾಮಗಾರಿ ಪೂರ್ಣಗೊಂಡಿದೆ. ಸದ್ಯ ತಾತ್ಕಾಲಿಕ ರಸ್ತೆಯ ಮೂಲಕ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಚಾರ್ಮಾಡಿಯಿಂದ ಧರ್ಮಸ್ಥಳಕ್ಕೆ ಆಗಮಿಸುವ ಭಕ್ತಾದಿಗಳ ಬಸ್ ಗಳು ಸೇರಿದಂತೆ ಬಹುತೇಕ ವಾಹನಗಳು ಈ ರಸ್ತೆಯಲ್ಲಿ ಸಾಗುತ್ತಿದ್ದು, ಮುಂಜಾಗೃತ ಕ್ರಮವಾಗಿ ವಾಹನಗಳ ಸಂಚಾರ ನಿಷೇಧಿಸಲಾಗಿದೆ.

ಇನ್ನು, ಕೊತ್ತಳಿಗೆ ಎಂಬಲ್ಲಿ ನೂತನ ಸೇತುವೆ ಕಾಮಗಾರಿ ಪೂರ್ಣಗೊಂಡಿದ್ದು, ಇಲ್ಲಿ ನೂತನ ಸೇತುವೆಯ ಮೂಲಕವೇ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಒಂಜರೆಬೈಲು ಹಾಗೂ ಪಿಲತ್ತಡ್ಕದ ನೂತನ ಸೇತುವೆ ಕಾಮಗಾರಿಯೂ ಆದಷ್ಟು ಶೀಘ್ರವಾಗಿ ಪೂರ್ಣಗೊಳ್ಳಲಿ ಎಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ (ರಿ.) ಕ್ಷೇತ್ರ ಸಮಿತಿ ಬೆಳ್ತಂಗಡಿ ವತಿಯಿಂದ “ಆಟಿದ ಕಮ್ಮೆನ ಬೊಕ್ಕಗೊಬ್ಬು”

ಟಾಪ್ ಸುದ್ದಿಗಳು, ವಿದೇಶ

ಟೋಕಿಯೋ : ಜಪಾನ್ ನಲ್ಲಿ 7.1 ತೀವ್ರತೆಯ ಪ್ರಬಲ ಭೂಕಂಪ – ಭೀಕರ ಸುನಾಮಿ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : ಖಾಸಗಿ ಬಸ್ – ಬೈಕ್ ಮಧ್ಯೆ ಅಪಘಾತ; ಪತಿ ಸಾವು, ಪತ್ನಿಗೆ ಗಂಭೀರ

⚠️ Contents are protected on this website.