ಉಜಿರೆ : ಕೊಚ್ಚಿ ಅಂಬಡಬೆಟ್ಟು ಹೋಗಿದ್ದ ತಾತ್ಕಾಲಿಕ ರಸ್ತೆಗೆ ಮರು ಜೀವ  – ಶಾಸಕ ಹರೀಶ್ ಪೂಂಜಾರಿಂದ ಸ್ಪಂದನೆ

ಉಜಿರೆ, ಜೂ. 11 : ಉಜಿರೆ ಮತ್ತು ಇಂದಬೆಟ್ಟು ಗ್ರಾಮಗಳ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ಅಂಬಡಬೆಟ್ಟು ಸೇತುವೆಯ ಪಕ್ಕದಲ್ಲಿ ನಿರ್ಮಿಸಲಾಗಿದ್ದ ತಾತ್ಕಾಲಿಕ ರಸ್ತೆಯು ಜೂ. 9ರಂದು ಸುರಿದ ಭಾರಿ ಮಳೆಗೆ ಸಂಪೂರ್ಣವಾಗಿ ಕೊಚ್ಚಿ ಹೋಗಿದ್ದು ಇದಕ್ಕೆ ಶಾಸಕ ಹರೀಶ್ ಪೂಂಜರು ಸ್ಪಂದನೆ ನೀಡಿದ್ದು ಇಂದು ತಾತ್ಕಾಲಿಕ ರಸ್ತೆಗೆ ಮರು ಜೀವ ಬಂದಂತಾಗಿದೆ.

ರಸ್ತೆ ಕೊಚ್ಚಿ ಹೋದ ಪರಿಣಾಮ ಈ ಮಾರ್ಗದಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದ್ದು, ಸಾರ್ವಜನಿಕರ ಕಾಲ್ನಡಿಗೆಗೂ ಅಸಾಧ್ಯವಾಗಿದ್ದು ಇಂದು ಹಿಟಾಚಿ ಮೂಲಕ ಮಣ್ಣು ಹಾಕಿ ಉಜಿರೆ ಮತ್ತು ಇಂದಬೆಟ್ಟು ಗ್ರಾಮಗಳ ಪ್ರಮುಖ ಸಂಪರ್ಕ ಕೊಂಡಿಯಾಗಿದ್ದ ಈ ರಸ್ತೆಯಲ್ಲಿ ಮತ್ತೆ ಸಂಚಾರವನ್ನು ಬೆಳೆಸಬಹುದಾಗಿದೆ .ಸಮಸ್ಯೆಗೆ ತ್ವರಿತ ಸ್ಪಂದನೆ ನೀಡಿ ರಸ್ತೆ ಸಂಪರ್ಕ ಒದಗಿಸಿದ ಶಾಸಕ ಹರೀಶ್ ಪೂಂಜರಿಗೆ ಈ ಭಾಗದ ಗ್ರಾಮಸ್ಥರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Advertisement
Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ (ರಿ.) ಕ್ಷೇತ್ರ ಸಮಿತಿ ಬೆಳ್ತಂಗಡಿ ವತಿಯಿಂದ “ಆಟಿದ ಕಮ್ಮೆನ ಬೊಕ್ಕಗೊಬ್ಬು”

ಟಾಪ್ ಸುದ್ದಿಗಳು, ವಿದೇಶ

ಟೋಕಿಯೋ : ಜಪಾನ್ ನಲ್ಲಿ 7.1 ತೀವ್ರತೆಯ ಪ್ರಬಲ ಭೂಕಂಪ – ಭೀಕರ ಸುನಾಮಿ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : ಖಾಸಗಿ ಬಸ್ – ಬೈಕ್ ಮಧ್ಯೆ ಅಪಘಾತ; ಪತಿ ಸಾವು, ಪತ್ನಿಗೆ ಗಂಭೀರ

⚠️ Contents are protected on this website.