ರೋಣ : ಭೀಕರ ರಸ್ತೆ ಅಪಘಾತ – ಮೂವರು ಮಹಿಳೆಯರು ಸ್ಥಳದಲ್ಲೇ ಸಾವು !

ರೋಣ, ಫೆ. 05 : ಟಾಟಾ ಕ್ಯಾಂಟರ್ ಗೂಡ್ಸ್ ವಾಹನ ಮತ್ತು ಪ್ಯಾಸೆಂಜರ್ ಕ್ರೂಸರ್ ನಡುವೆ ಡಿಕ್ಕಿ ಸಂಭವಿಸಿ ಮೂವರು ಮಹಿಳೆಯರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಜಿಗಳೂರ ಕ್ರಾಸ್ ಬಳಿ ಗುರುವಾರ ಬೆಳಗ್ಗೆ ನಡೆದಿದೆ. ಹದಿನೈದಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.

Advertisement

ಗಜೇಂದ್ರಗಡ ಪಟ್ಟಣದ ಶಿವಾಜಿ ಪೇಟೆಯ ಮರಿಯಂಬು ದಾದೇಸಾಬ್ ಹುನಗುಂದ (55), ಅನ್ನಪೂರ್ಣ ಲಕ್ಷ್ಮಣ ಚಂಗಳಿ (45), ಸುಜಾತಾ ರಾಜಪ್ಪ ಹೊಸಮನಿ (30) ಮೃತಪಟ್ಟವರು. ಇವರೆಲ್ಲರೂ ಕೃಷಿ ಕೂಲಿ ಕಾರ್ಮಿಕರಾಗಿದ್ದು, ಗಜೇಂದ್ರ ಗಡದಿಂದ ರೋಣ ಪಟ್ಟಣದ ಕಡೆ ತೆರಳುವಾಗ ಅಪಘಾತ ಸಂಭವಿಸಿದೆ.

ವಾಹನದಲ್ಲಿ ಉಳಿದವರಿಗೂ ಗಾಯಗಳಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ರೋಣ ಪಟ್ಟಣದ ಸರಕಾರಿ ಆಸ್ಪತ್ರೆ ಹಾಗೂ ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ, ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ರೋಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲಿಸರು ತನಿಖೆ ಕೈಗೊಂಡಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.