ಉಡುಪಿ : ಮೂವರು ರೌಡಿ ಶೀಟರ್‌ಗಳ ಗಡಿಪಾರು – ಹರಿರಾಂ ಶಂಕರ್ ಆದೇಶ

Advertisement

ಉಡುಪಿ, ಜೂ. 26 : ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯ ಮೂವರು ರೌಡಿ ಶೀಟರ್‌ಗಳನ್ನು ಗಡಿಪಾರು ಮಾಡಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹಾಗೂ ವಿಶೇಷ ಕಾರ್ಯಾಂಗ ದಂಡಾಧಿಕಾರಿ ಹರಿರಾಂ ಶಂಕರ್ ಆದೇಶ ಹೊರಡಿಸಿದ್ದಾರೆ.

Advertisement

ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗುಲ್ವಾಡಿ ಗ್ರಾಮದ ಮಾವಿನಕಟ್ಟೆ ನಿವಾಸಿ ದಾನೀಶ್ ಮದನಿ (23) ಮತ್ತು ಕಾವ್ರಾಡಿ ಗ್ರಾಮ ಕಂಡ್ಲೂರು ನಿವಾಸಿ ಕರಾಣಿ ಮುಸೀನ್(44) ಹಾಗೂ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಪಾದೂರು ಗ್ರಾಮದ ಚಂದ್ರನಗರದ ಜನತಾ ಕಾಲೋನಿಯ ಇಲಿಯಾಸ್(36) ಎಂಬವರ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿ ಜೂ.24ರಂದು ಈ ಆದೇಶ ಹೊರಡಿಸಿದ್ದಾರೆ.

Advertisement

ದಾನೀಶ್ ಮದನಿ ವಿರುದ್ಧ ಎಂಟು ಪ್ರಕರಣಗಳು ದಾಖಲಾಗಿದ್ದು, ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ರೌಡಿ ಶೀಟರ್ ತೆರೆಯಲಾಗಿದೆ. ಕರಾಣಿ ಮುಸೀನ್ ವಿರುದ್ಧ 7 ಪ್ರಕರಣಗಳು ದಾಖಲಾಗಿದ್ದು ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ರೌಡಿ ಶೀಟರ್ ತೆರೆಯಲಾಗಿದೆ. ಇಲಿಯಾಸ್ ವಿರುದ್ಧ 15 ಪ್ರಕರಣಗಳು ದಾಖಲಾಗಿದ್ದು ಶಿರ್ವ ಠಾಣೆಯಲ್ಲಿ ರೌಡಿ ಶೀಟರ್ ತೆರೆಯಲಾಗಿದೆ. ಗಡಿಪಾರು ಕ್ರಮಕ್ಕೆ ಒಳಗಾದ ಈ ಮೂವರು ಆರೋಪಿಗಳು, ಕೊಲೆ, ಕೊಲೆಯತ್ನ, ಪೊಲೀಸ್ ಠಾಣೆಗೆ ಕಲ್ಲೆಸೆತ, ಕಳವು, ಜಾನುವಾರು ಕಳವು, ಜಾನುವಾರು ಹತ್ಯೆ, ರೌಡಿಸಂ ಪ್ರವೃತ್ತಿಯ ಹಲ್ಲೆ ಮುಂತಾದ ಪ್ರಕರಣಗಳ ಸಹಿತ ಒಟ್ಟು 30 ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ದಾನೀಶ್ ಮದನಿನನ್ನು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಗೆ, ಕರಾಣಿ ಮುಸೀನ್‌ ನನ್ನು ಬೀದರ್ ಜಿಲ್ಲೆಯ ಗಾಂಧಿ ಗಂಜ ಪೊಲೀಸ್ ಠಾಣಾ ವ್ಯಾಪ್ತಿಗೆ ಮತ್ತು ಇಲಿಯಾಸ್‌ನನ್ನು ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.

ಕಳೆದ ಒಂದು ವರ್ಷದಿಂದ ಜಿಲ್ಲೆಯಲ್ಲಿ ಸಮಾಜ ವಿರೋಧಿ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಉಡುಪಿ ಪೊಲೀಸರು ತಿಳಿಸಿದ್ದಾರೆ. ಈ ಅವಧಿಯಲ್ಲಿ ಮೂವರನ್ನು ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಬಂಧಿಸಲಾಗಿದೆ, ನಾಲ್ವರ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಜೈಲಿಗೆ ಹಾಕಲಾಗಿದೆ, 14 ಜನ ಸಾಮಾನ್ಯರ ವಿರುದ್ಧ ಗಡಿಪಾರು ಆದೇಶ ಹೊರಡಿಸಲಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ