ಬೆಂಗಳೂರು : ಕರ್ನಾಟಕದ ವನ್ಯಜೀವಿಧಾಮಗಳಲ್ಲಿ ತೆರೆದ ವಾಹನ ಸಫಾರಿ ಬಂದ್‌ – ಈಶ್ವರ್ ಖಂಡ್ರೆ

ಬೆಂಗಳೂರು, ಮೇ 21 : ರಾಜ್ಯದ ಐದು ಹುಲಿ ಸಂರಕ್ಷಿತ ಪ್ರದೇಶ ಹಾಗೂ ವನ್ಯಜೀವಿಧಾಮಗಳ ವ್ಯಾಪ್ತಿಯಲ್ಲಿ ಸಫಾರಿಗೆ ತೆರೆದ ವಾಹನ ಬಳಕೆ ಮಾಡದಂತೆ ಹಾಗೂ ಸಫಾರಿ ಕ್ಯಾಂಪರ್‌ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಬೇಕು ಎಂದು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಸೂಚನೆ ನೀಡಿದ್ದಾರೆ.

Advertisement

ದುಬಾರೆ ಆನೆ ಶಿಬಿರದಲ್ಲಿ ಎರಡು ಆನೆಗಳ ಕಾಳಗದ ವೇಳೆ ಪ್ರವಾಸಿ ಮಹಿಳೆ ಮೃತಪಟ್ಟ ಆಘಾತಕಾರಿ ಘಟನೆ ಹಿನ್ನೆಲೆಯಲ್ಲಿ ಸಚಿವರು ಈ ಕ್ರಮ ಕೈಗೊಂಡಿದ್ದಾರೆ. ”ಬಂಡೀಪುರ, ನಾಗರಹೊಳೆ, ಕಾಳಿ, ಬಿಳಿಗಿರಿ ರಂಗನಬೆಟ್ಟ ಮತ್ತು ಭದ್ರಾ ಹುಲಿ ಸಂರಕ್ಷಿತ ಪ್ರದೇಶ, ಮಲೆ ಮಹದೇಶ್ವರ ಬೆಟ್ಟ, ದಾಂಡೇಲಿ, ಕೆ.ಗುಡಿ ಸೇರಿದಂತೆ ರಾಜ್ಯದ ನಾನಾ ವನ್ಯಜೀವಿಧಾಮ ಮತ್ತು ಕಾನನಗಳಲ್ಲಿ ಸಫಾರಿ ನಡೆಯುತ್ತಿದೆ. ಅಲ್ಲಿನ ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು,” ಎಂದು ಸೂಚಿಸಿದ್ದಾರೆ.

”ಸಫಾರಿಗೆ ಬರುವ ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಇನ್ನು ಮುಂದೆ ತೆರೆದ ಕ್ಯಾಂಪರ್‌ ವಾಹನಗಳ ಬದಲಿಗೆ ಸುರಕ್ಷಿತವಾದ ಬಸ್‌ ಸಫಾರಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಹಾಲಿ ಬಳಕೆಯಲ್ಲಿರುವ ಕ್ಯಾಂಪರ್‌ಗಳಿಗೆ ಕಬ್ಬಿಣದ ಸರಳುಗಳಿಂದ ಕೂಡಿದ ಜಾಲರಿಗಳನ್ನು ಅಥವಾ ಒಡೆಯಲಾಗದ ಗಾಜು ಅಳವಡಿಸಬೇಕು. ಯಾವುದೇ ಪ್ರವಾಸಿಗರು ಅರಣ್ಯದೊಳಗೆ ಇಳಿಯಲು ಅವಕಾಶ ನೀಡಬಾರದದು. ಪ್ರತಿ ಸಫಾರಿ ವಾಹನದಲ್ಲಿ ಪ್ರಥಮ ಚಿಕಿತ್ಸೆ ಕಿಟ್‌ ಹಾಗೂ ಸಫಾರಿ ಕೇಂದ್ರಗಳಿಗೆ ಸಮೀಪದಲ್ಲಿ ಆಂಬ್ಯುಲೆನ್ಸ್‌ ವಾಹನ ಇರುವುದನ್ನು ಖಾತರಿಪಡಿಸಿಕೊಳ್ಳಬೇಕು,” ಎಂದು ಸ್ಪಷ್ಟ ನಿರ್ದೇಶನಗಳನ್ನು ನೀಡಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.