ಬೆಂಗಳೂರು : ಯೂಟ್ಯೂಬರ್ ಎಂಡಿ ಸಮೀರ್ ವಿರುದ್ಧದ ಪ್ರಕರಣವೊಂದು ಬೆಂಗಳೂರು ಹೈಕೋರ್ಟ್ ಪ್ರಧಾನ ಪೀಠದಿಂದ ಧಾರವಾಡ ಪೀಠಕ್ಕೆ ವರ್ಗಾಯಿಸಲಾಗಿದೆ. ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧ ತನ್ನ ಯುಟ್ಯೂಬ್ ಚಾನಲ್‌ನಲ್ಲಿ ವಿಡಿಯೋ ಪ್ರಸಾರ ಮಾಡಿದ್ದ ಯುಟ್ಯೂಬರ್ ಎಂ.ಡಿ. ಸಮೀರ್ ವಿರುದ್ಧ ಬಳ್ಳಾರಿಯ ಕೌಲ್ ಬಜಾರ್ ಠಾಣೆಯಲ್ಲಿ ದಾಖಲಾದ ಕೇಸ್ ವಿಚಾರಣೆಯನ್ನು ಬೆಂಗಳೂರು ಹೈಕೋರ್ಟ್ ಪ್ರಧಾನ ಪೀಠದಿಂದ ಧಾರವಾಡ ಪೀಠಕ್ಕೆ ವರ್ಗಾಯಿಸಲಾಗಿದೆ.
ಬಳ್ಳಾರಿಯಲ್ಲಿ ಮಾರ್ಚ್ ತಿಂಗಳಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ಯುಟ್ಯೂಬರ್ ಎಂ.ಡಿ. ಸಮೀರ್ ಸಲ್ಲಿಸಿರುವ ಅರ್ಜಿಯನ್ನು ನ್ಯಾ. ಮೊಹಮ್ಮದ್ ನವಾಜ್ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ವಾದ ವಿವಾದ ಆಲಿಸಿದ ಪೀಠ, ಸರ್ಕಾರ ಮಧ್ಯಂತರ ಆದೇಶ ತೆರವಿಗೆ ಅರ್ಜಿ ಸಲ್ಲಿಸಿದೆ. ವ್ಯಾಪ್ತಿಯ ವಿಚಾರ ಇರುವುದರಿಂದ ಈ ಅರ್ಜಿಯನ್ನು ಧಾರವಾಡ ಪೀಠಕ್ಕೆ ವರ್ಗಾಯಿಸಲಾಗುತ್ತಿದೆ ಎಂದು ವಿಚಾರಣೆ ಮುಂದೂಡಿ ಆದೇಶಿಸಿದೆ.

