29 ಏ. 2026ರಂದು ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ

ಧರ್ಮಸ್ಥಳ, ಡಿ. 29 : ಪವಿತ್ರ ಕ್ಷೇತ್ರ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 2026ರ ಏಪ್ರಿಲ್ 29 ರಂದು ಸಂಜೆ ಗಂಟೆ 6.40ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ನಡೆಯಲಿದೆ.

Advertisement

ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ, ಹಾಗೂ ಮಂಗಳಸೂತ್ರ ಹಾಗೂ ಹೂವಿನಹಾರ ನೀಡಲಾಗುವುದು. ಮದುವೆಯ ಎಲ್ಲಾ ವೆಚ್ಚವನ್ನು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷರಾಗಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದ ಭರಿಸಲಾಗುವುದು. ಎರಡನೇ ವಿವಾಹಕ್ಕೆ ಅವಕಾಶವಿರುವುದಿಲ್ಲ.

ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಾಧಿಕಾರಿಗಳಾದ ಡಿ. ವೀರೇಂದ್ರ ಹೆಗ್ಗಡೆಯವರು 1972ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹವನ್ನು ಪ್ರತಿ ವರ್ಷ ನಡೆಸಲಾಗುತ್ತಿದೆ. ಈ ತನಕ ಒಟ್ಟು ಹದಿಮೂರು ಸಾವಿರ ಜೋಡಿ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಿದ್ದು, ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ.

ಸಾಮೂಹಿಕ ವಿವಾಹದಲ್ಲಿ ಮದುವೆ ಆಗಲಿಚ್ಛಿಸುವವರು 2026ರ ಏಪ್ರಿಲ್ 25 ರೊಳಗೆ ಸವಿವರ ಮಾಹಿತಿ
ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ದೂರವಾಣಿ 08256-266644,

  1. 9663464648, 8147263422

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಸಚಿವ ಸ್ಥಾನಕ್ಕಾಗಿ ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ 31 ಶಾಸಕರಿಂದ ಪತ್ರ – ಕೈ ಪಾಳಯದಲ್ಲಿ “ಪತ್ರ ಸ್ಫೋಟ”

ಟಾಪ್ ಸುದ್ದಿಗಳು, ರಾಜ್ಯ / ದೇಶ

ತಮಿಳುನಾಡು : ಎಐಎಡಿಎಂಕೆ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ 10,000 ರೂ. ಘೋಷಣೆ !

ವಿದೇಶ

ಅಮೆರಿಕದಲ್ಲಿ ಭಾರಿ ಹಿಮಪಾತ: 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು, ಶಾಲೆಗಳಿಗೆ ರಜೆ

⚠️ Contents are protected on this website.