ಗುಂಡ್ಯ, ಡಿ. 15 : ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಕು ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಚಾಲಕ ಹಾಗೂ ಸಿಬ್ಬಂದಿಗಳು ಅದೃಷ್ಟವಶಾತ್ ಪಾರಾಗಿದ್ದಾರೆ.
ಲಾರಿಯಲ್ಲಿ ಸಾಗಿಸಲಾಗುತ್ತಿದ್ದ ಸರಕುಗಳು ರಸ್ತೆ ಮೇಲೆ ಚದುರಿದ್ದು, ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಅದೃಷ್ಟವಶಾತ್ ಲಾರಿಯ ಚಾಲಕ ಹಾಗೂ ಸಿಬ್ಬಂದಿಗಳು ಯಾವುದೇ ಗಂಭೀರ ಗಾಯಗಳಿಲ್ಲದೆ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

