ಬೆಳ್ತಂಗಡಿ :  ಟೆಂಪೋ ಹಾಗೂ 2 ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ – ಸ್ಕೂಟ‌ರ್ ಸವಾರ ಸಾವು

ಬೆಳ್ತಂಗಡಿ, ನ. 11 : ಚರ್ಚ್ ರೋಡ್ ನಲ್ಲಿ ಇಂದು ಮುಂಜಾನೆ ಗೂಡ್ಸ್‌ ಟೆಂಪೋ ಹಾಗೂ ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಸ್ಕೂಟ‌ರ್ ಸವಾರ ಓರ್ವರು ಮೃತಪಟ್ಟು, ಬೈಕ್ ಸವಾರ ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಮೃತಪಟ್ಟವರನ್ನು ನಾವೂರು ನಿವಾಸಿ ಸಂತೋಷ್ (32) ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡಿರುವವರನ್ನು ಕಣಿಯೂರು ಗ್ರಾಮದ ಪಿಲಿಗೂಡು ನಿವಾಸಿ ಮೋಹನ್ (33) ಎಂದು ಗುರುತಿಸಲಾಗಿದೆ. ಗಾಯಾಳು ಮೋಹನ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಗಳೂರಿನಿಂದ ಚಿಕ್ಕಮಗಳೂರು ಕಡೆಗೆ ಹೋಗುತ್ತಿದ್ದ ಟಾಟಾ ಗೂಡ್ಸ್ ವಾಹನವು, ಗುರುವಾಯನಕೆರೆ ಕಡೆ ಹೋಗುತ್ತಿದ್ದ ಎರಡು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಗೂಡ್ಸ್‌ ವಾಹನ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.

ಮೃತ ಸಂತೋಷ್ ಅವರು ಮಂಗಳೂರಿನಲ್ಲಿ ಚಾಲಕ ವೃತ್ತಿ ಮಾಡುತ್ತಿದ್ದರು. ಗಾಯಾಳು ಮೋಹನ್ ಅವರು ಬೆಳ್ತಂಗಡಿಯ ಸುವರ್ಣ ಪ್ರಿಂಟಿಂಗ್‌ ಪ್ರೆಸ್ ನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಇವರ ನೂತನ ಉತ್ಪನ್ನ ನೂತನ ತಂತ್ರಜ್ಞಾನದ “ಲಕ್ಷ್ಮೀದ್ವಾರ” ಲೋಕಾರ್ಪಣೆ

ಟಾಪ್ ಸುದ್ದಿಗಳು

ಬೆಳ್ತಂಗಡಿ : ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ವತಿಯಿಂದ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ 7ನೇ ವರ್ಷದ ದೀಪಾವಳಿ ದೋಸೆ ಹಬ್ಬ-2026, ಸಹಸ್ರಾರು ಜನರು ಭಾಗಿ !

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : ತಾಯಿ ಮತ್ತು ಶಿಶು ಮರಣ ಪ್ರಮಾಣ ಶೂನ್ಯ, ಲೇಡಿಗೋಶನ್ ಆಸ್ಪತ್ರೆಗೆ ರಾಜ್ಯ ಪ್ರಶಸ್ತಿ ದೊರೆತಿರುವುದು ಸಂತಸದ ವಿಚಾರ – ಸಚಿವ ಯು.ಟಿ. ಖಾದರ್