ಪುತ್ತೂರು : ಜಾತ್ರೋತ್ಸವಕ್ಕೆ ಹಾಕಿದ್ದ ಭಗವಾಧ್ವಜ ತೆರವು – ಮನೆ ಮನೆಗೆ ತೆರಳಿ ಭಗವಾಧ್ವಜ ಅಳವಡಿಸಿದ ಹಿಂದೂ ಕಾರ್ಯಕರ್ತರು !

Advertisement

ಪುತ್ತೂರು, ಡಿ. 22 : ಸರ್ವೆ ಗ್ರಾಮ ದೇವರ ಜಾತ್ರೋತ್ಸವ ಪ್ರಯುಕ್ತ ಭಕ್ತಕೋಡಿ ಜಂಕ್ಷನ್ ಅಲ್ಲಿ ಅಳವಡಿಸಲಾಗಿದ್ದ ಭಗವಾಧ್ವಜ ಕಿತ್ತು ತೆಗೆದಿರುವ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿ ವಿರುದ್ಧ ಹಾಗೂ ಭಗವಾದ್ವಜ ಹಾಕಿರುವವರ ಮೇಲೆ ಕೇಸ್ ದಾಖಲು ಮಾಡಿರುವುದನ್ನು ಖಂಡಿಸಿ ಹಾಗೂ ಭಗವಾದ್ವಜ ವಿರುದ್ಧ ಮಾನಸಿಕತೆ ಇರುವವರಿಗೆ ಸದ್ಬುದ್ದಿ ಕೊಡಲಿ ಎಂದು ಹಿಂದೂ ಹಿತರಕ್ಷಣಾ ಸಮಿತಿ ವತಿಯಿಂದ ಸರ್ವೆ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಹಾಗೂ ಖಂಡನಾ ಸಭೆ ನಡೆಯಿತು.

Advertisement

ಖಂಡನಾ ಸಭೆಯಲ್ಲಿ ಸೇರಿದ್ದ ಹಿಂದೂ ಭಾಂದವರನ್ನು ಉದ್ದೇಶಿಸಿ ಹಿಂದೂ ಮುಖಂಡರಾದ ಮುರಳಿಕೃಷ್ಣ ಹಸಂತಡ್ಕ ಪ್ರಾಸ್ತಾವಿಕ ಭಾಷಣ ಮಾಡಿದರು. ವಿಧಾನಪರಿಷತ್ ಶಾಸಕರಾದ ಕೀಶೋರ್ ಕುಮಾರ್ ಬೊಟ್ಯಾಡಿ, ಮಾಜಿ ಶಾಸಕರಾದ ಸಂಜೀವ ಮಠಂದೂರು,ವಿಶ್ವ ಹಿಂದೂ ಪರಿಷದ್‌ ಪುತ್ತೂರು ಗ್ರಾಮಾಂತರ ಪ್ರಖಂಡ ಅಧ್ಯಕ್ಷರಾದ ಜಯಂತ್ ಶೆಟ್ಟಿ ಕಂಬಳತ್ತಡ್ಡ ಹಾಗೂ ಅಕ್ಷಯ್ ರಜಪೂತ್ ಇವರು ಖಂಡನಾ ಸಭೆಯನ್ನು ಉದ್ದೇಶಿಸಿ ಮಾತನ್ನಾಡಿದರು. ನಂತರ ಗ್ರಾಮದ ಹಿಂದೂ ಮನೆಗಳಿಗೆ ತೆರಳಿ ಭಗವಧ್ವಜ ಹಾಕುವ ಕಾರ್ಯ ನಡೆಯಿತು.

Advertisement

ಈ ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷದ್‌ ಬಜರಂಗದಳ,ಭಾರತೀಯ ಜನತಾ ಪಾರ್ಟಿ ಹಾಗೂ ಹಿಂದೂ ಜಾಗರಣ ವೇದಿಕೆಯ ಪ್ರಮುಖರು,ಕಾರ್ಯಕರ್ತರು ಮತ್ತು ಸ್ಥಳೀಯ ಹಿಂದೂ ಬಾಂಧವರು ಉಪಸ್ಥಿತರಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ