ಉಡುಪಿ : ಏಣಿಯಿಂದ ಆಯತಪ್ಪಿ ಬಿದ್ದು ವಿದ್ಯಾರ್ಥಿ ಸಾವು – ಮನೆಗ ಆಧಾರವಾಗಲು ರಜೆಯಲ್ಲಿ ಕೆಲಸಕ್ಕೆ ತೆರಳಿದ್ದ ಸಾತ್ವಿಕ್ !

Advertisement

ಉಡುಪಿ, ಮಾ. 26 : ಏಣಿಯಿಂದ ಆಯತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಹೆಬ್ರಿ ಹುತುರ್ಕೆ ಎಂಬಲ್ಲಿ ನಡೆದಿದೆ. ಹೆಬ್ರಿ ತಾಲೂಕಿನ ಬೇಳಂಜೆ ನಿವಾಸಿ ಸಾತ್ವಿಕ್ ಮೃತದುರ್ದೈವಿ ಎಂದು ಗುರುತಿಸಲಾಗಿದೆ.

Advertisement

ಈತ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದು, ರಜೆಯಲ್ಲಿ ತನ್ನ ವಿದ್ಯಾಭ್ಯಾಸಕ್ಕೂ, ಮನೆಯ ಖರ್ಚಿಗೂ ಸಹಾಯವಾಗಲಿ ಎಂಬ ಉದ್ದೇಶದಿಂದ ಕೆಲಸಕ್ಕೆ ಹೋಗಿದ್ದರು. ಆದರೆ ವಿಧಿಯಾಟ ಬೇರೆಯೇ ಆಗಿತ್ತು, ಹೆಬ್ರಿ ಹುತುರ್ಕೆ ಎಂಬಲ್ಲಿ ಕೆಲಸ ಮಾಡುವಾಗ ಏಣಿಯಿಂದ ಆಯತಪ್ಪಿ ಬಿದ್ದು ಇಹಲೋಕ ತ್ಯಜಿಸಿದ್ದಾರೆ. ಮನೆಗೆ ಆಧಾರವಾಗಿದ್ದ ಮಗನನ್ನು ಕಳೆದುಕೊಂಡು, ಮನೆಯವರು ದಿಕ್ಕು ತೋಚದಂತಾಗಿದ್ದಾರೆ.

Advertisement

ಈತ ಕೇವಲ ವಿದ್ಯಾರ್ಥಿ ಮಾತ್ರವಲ್ಲ, ಮನೆಯ ಆಧಾರವಾಗಿದ್ದನು. ಸಾತ್ವಿಕ್ ಗೆ ಕೃಷಿಯ ಬಗ್ಗೆ ಅರಿವು ಇತ್ತು. ಮೊನ್ನೆಯಷ್ಟೆ ಪಿಯುಸಿ ಪರೀಕ್ಷೆ ಮುಗಿಸಿದ್ದ. ಮುಂದಿನ ಹಂತ ಡಿಗ್ರಿ ವಿದ್ಯಾಭ್ಯಾಸ. ಅದಕ್ಕಾಗಿ ಹಣ ಬೇಕು, ಮನೆಯವರಿಗೂ ಕೈಲಾದ ಸಹಾಯ ಮಾಡಬೇಕು ಎಂಬ ದೃಷ್ಟಿಯಿಂದ ರಜೆಯಲ್ಲಿ ಕೆಲಸಕ್ಕೆ ಹೋಗಿದ್ದ. ಕೆಲಸಕ್ಕೆ ಹೋದವನು ಮನೆಗೆ ಮರಳಿ ಬಾರದೆ, ದುರ್ಘಟನೆಯಲ್ಲಿ ತನ್ನ ಪ್ರಾಣ ಕಳೆದುಕೊಂಡಿದ್ದಾನೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ