ಬೆಳ್ತಂಗಡಿ : ಎಸ್.ಐ.ಆರ್ ಗೆ ತೆರಳಿದ್ದ ದಲಿತ ಸಮುದಾಯದ ಬಿಎಲ್ ಒ ಗೆ ಜಾತಿನಿಂದನೆ – ಪ್ರಕರಣ ದಾಖಲು

ಬೆಳ್ತಂಗಡಿ, ಜು. 8 : ತಾಲೂಕಿನ ಶಿರ್ಲಾಲಿನಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ಜಾತಿ ನಿಂದನೆ ಮಾಡಿದ ಮಹಿಳೆಯ ವಿರುದ್ಧ ಪ್ರಕರಣ ದಾಖಲಾಗಿರುವುದು ವರದಿಯಾಗಿದೆ. ಎಸ್.ಐಆರ್ ಕೆಲಸಕ್ಕೆಂದು ತೆರಳಿದ್ದ ದಲಿತ ಸಮುದಾಯಕ್ಕೆ ಸೇರಿದ‌ ಬಿಎಲ್ಒ ಗೆ ಸ್ಥಳೀಯ ನಿವಾಸಿ ಯಶೋಧ ಆಚಾರಿ ಎಂಬವರು ಮನೆಯೊಳಗೆ ಪ್ರವೇಶಿಸಲು ಅನುಮತಿ ನೀಡದೆ “ನೀನು ಹೊರಗೆ ನಿಲ್ಲು ನಿನ್ನ ಜಾತಿಯವರು ಅಲ್ಲಿಯೇ ನಿಲ್ಲುವುದು ಬರಬಾರದು” ಎಂದು ಜಾತಿ ನಿಂದನೆ ಮಾಡಿರುವುದಾಗಿ ವೇಣೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ.

Advertisement

ಸ್ಥಳೀಯ ಅಂಗನವಾಡಿ ಕಾರ್ಯಕರ್ತೆ ಬಿಎಲ್.ಒ ಆಗಿ ಕೆಲಸ ಮಾಡುತ್ತಿದ್ದು ಶಿರ್ಲಾಲು ಗ್ರಾಮದ ಪಲ್ಲದೋಡಿ ಕಾಳಿಕಾಂಬ ನಿವಾಸಿ ಯಶೋಧ ಆಚಾರಿ ಎಂಬವರ ಮನೆಗೆ ಎಎಲ್ಒ‌ ಮಾಧವ ಎಂಬರೊಂದಿಗೆ ಜು.6 ರಂದು ಬೆಳಗ್ಗೆ 11:30 ಕ್ಕೆ ಮನೆಯ ಅಂಗಳಕ್ಕೆ ಪ್ರವೇಶಿಸಿದಾಗ “ನೀನು ಅಲ್ಲಿಯೇ ನಿಲ್ಲು ನಿಮ್ಮ ಜಾತಿಯವರು ಇಲ್ಲಿಗೆ ಬರುವುದಿಲ್ಲ” ಎಂದು ಹೇಳಿದ್ದು ಮನೆಯ ಸಿಟ್ ಔಟ್ ಗೆ ಪ್ರವೇಶ ನೀಡದೆ ಮೆಟ್ಟಿಲು ಬಳಿಯೇ ಮಾತಿನಲ್ಲಿಯೇ ತಡೆದು ಯಶೋಧ ಆಚಾರಿ ನಿಲ್ಲಿಸಿ ಅಪಮಾನ ಮಾಡಿ ಜಾತಿ ನಿಂದನೆ ಮಾಡಿರುವುದಾಗಿ ಜು.7 ರಂದು ದೂರು ನೀಡಿದ್ದಾರೆ.

ಬಿಎಲ್ಒ ನೀಡಿದ ದೂರಿನ ಮೇರೆಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಆರೋಪಿ ಯಶೋಧ ಆಚಾರಿ ವಿರುದ್ಧ ಜು.7 ರಂದು SC/ST act-2015(u/s-3(1)(r),3(2)(va)) ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಬಿಎಲ್ಒ ಅವರ ಜೊತೆ ಅಮಾನವೀಯವಾಗಿ ನಡೆದುಕೊಂಡ ಮಹಿಳೆಯ ವಿರುದ್ದ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

⚠️ Contents are protected on this website.