ಬೆಳ್ತಂಗಡಿ : ಡಿ. 29 ರಂದು ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಗುತ್ತಿನಬೈಲು ಶಾಲೆಯ ಬೆಳ್ಳಿ ಹಬ್ಬ ಸಂಭ್ರಮ

ಬೆಳ್ತಂಗಡಿ, ಡಿ. 26 : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಗುತ್ತಿನಬೈಲು ಹಾಗೂ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ, ಹಳೇ ವಿದ್ಯಾರ್ಥಿ ಸಂಘ ನೇತೃತ್ವದಲ್ಲಿ ಡಿಸೆಂಬರ್ 29 ಸೋಮವಾರದಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಗುತ್ತಿನಬೈಲು ಶಾಲೆಯ ಬೆಳ್ಳಿ ಹಬ್ಬ ಸಂಭ್ರಮ ನಡೆಯಲಿದೆ.

Advertisement

ಬೆಳ್ಳಿಹಬ್ಬ ಸಂಭ್ರಮದ ಪ್ರಯುಕ್ತ ಬೆ. 09 ಗಂಟೆಗೆ ಧ್ವಜಾರೋಹಣ, ಸಂಜೆ 05 ಗಂಟೆಗೆ ಅಂಗನವಾಡಿ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಸಂಜೆ 06 ಗಂಟೆಗೆ ಸಭಾ ಕಾರ್ಯಕ್ರಮ ಹಾಗೂ ರಾತ್ರಿ 07 ಗಂಟೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುತ್ತಿನಬೈಲು ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ರಾತ್ರಿ 09 ಗಂಟೆಗೆ ಗುತ್ತಿನಬೈಲು ಶಾಲಾ ಹಳೇ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ವೈಭವವು ನಡೆಯಲಿದೆ ಎಂದು ಶಾಲಾ ಮುಖ್ಯೋಪಾಧ್ಯಯರು ಮಾಹಿತಿ ನೀಡಿದ್ದಾರೆ.

ಧ್ವಜಾರೋಹಣ :

ಧ್ವಜಾರೋಹಣವನ್ನು ಸ.ಹಿ.ಪ್ರಾ. ಶಾಲೆ ಗುತ್ತಿನಬೈಲು ಮಾಜಿ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ, ಅಧ್ಯಕ್ಷರಾದ ಶ್ರೀ ಸುರೇಶ್ ಕುಮಾರ್ ನೆರವೇರಿಸಲಿದ್ದಾರೆ. ಉದ್ಘಾಟನೆಯನ್ನು ಬೆಸ್ಟ್ ಫೌಂಡೇಶನ್ ನ ಶ್ರೀ ರಕ್ಷಿತ್ ಶಿವರಾಂ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೇಲಂತಬೆಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀ ಲೋಕನಾಥ್ ಶೆಟ್ಟಿ ವಹಿಸಲಿದ್ದಾರೆ ಹಾಗೂ ಅತಿಥಿಗಳು ಉಪಸ್ಥಿತರಿರಲಿದ್ದಾರೆ.

ಸಭಾ ಕಾರ್ಯಕ್ರಮ :

ಇನ್ನು, ಸಭಾ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷರಾದ ಶ್ರೀ ಯು.ಟಿ. ಖಾದರ್ ಫರೀದ್, ಉಸ್ತುವಾರಿ ಸಚಿವರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಶ್ರೀ ಮಧು ಬಂಗಾರಪ್ಪ ಘನ ಉಪಸ್ಥಿತಿ ಇರಲಿದ್ದಾರೆ. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜಾ ವಹಿಸಲಿದ್ದಾರೆ. ಹಾಗೂ ವೇದಿಕೆಯಲ್ಲಿ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ರಾಜ್ಯಸಭೆ ಸಂಸದರಾದ ಶ್ರೀ ಡಾ| ಡಿ. ವೀರೇಂದ್ರ ಹೆಗ್ಗಡೆ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿರಲಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಕರಾವಳಿ, ಟಾಪ್ ಸುದ್ದಿಗಳು

ಮಣಿಪಾಲ : ಚಾಲಕನ ನಿಯಂತ್ರಣ ತಪ್ಪಿ ಬಸ್ ನಿಲ್ದಾಣಕ್ಕೆ ಢಿಕ್ಕಿ ಹೊಡೆದ ಕಾರು – ಓರ್ವ ಸಾವು !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಲೋಕನಾಡು ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಕಳವು

ಟಾಪ್ ಸುದ್ದಿಗಳು, ರಾಜ್ಯ / ದೇಶ

“ಆಪರೇಶನ್ ಸಿಂಧೂರ್” ಭಯಾನಕ ದಾಳಿ ಬಳಿಕ – ಇಲಿಗಳಂತೆ ಬಿಲ ಸೇರಿದ್ದಾವೆ ಪಾಕಿಸ್ತಾನದ ಹಫೀಜ್ ಸಯೀದ್ – ಮಸೂದ್ ಅಜರ್ !

⚠️ Contents are protected on this website.