ಮಂಗಳೂರು: ಸ್ಕೂಲ್‌ ಬಸ್‌ ಅಪಘಾತ- ಇಬ್ಬರು ಮಕ್ಕಳಿಗೆ ಗಂಭೀರ ಗಾಯ

ಮಂಗಳೂರು, ಅ. 24 : ಸ್ಕೂಲ್‌ ಬಸ್‌ಗೆ ಟೂರಿಸ್ಟ್‌ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬಸ್‌ ಕಮರಿಗೆ ಉರಳಿದ ಘಟನೆ ಮುಲ್ಕಿ ಸಮೀಷದ ಕೋಲ್ನಾಡುವಿನಲ್ಲಿ ನಡೆದಿದೆ. ಶುಕ್ರವಾರ ಸಂಜೆ ಈ ಘಟನೆ ನಡೆದಿದ್ದು, ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದಾರೆ.

ಕೊಲ್ನಾಡುಗುತ್ತು ಬಳಿ ಘಟನೆ ನಡೆದಿದೆ. ಮಂಗಳೂರಿನ ಕುಳಾಯಿ ಮೂಲದ ಖಾಗಿ ಶಾಲೆಯ ಬಸ್‌ ಅಪಘಾತಗೊಂಡಿದೆ. ಶಾಲಾ ಬಸ್‌ ಕೊಲ್ನಾಡುವಿನಲ್ಲಿ ಯು ಟರ್ನ್‌ ತೆಗೆದು ವಿದ್ಯಾರ್ಥಿನಿಯನ್ನು ಇಳಿಸಿ ಮುಂದಕ್ಕೆ ಸಾಗುವ ವೇಳೆ ಹಿಂಬದಿಯಿಂದ ಅತಿ ವೇಗದಿಂದ ಬಂದ ತಮಿಳುನಾಡು ಮೂಲದ ಟುರಿಸ್ಟ್‌ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್‌ ರಸ್ತೆ ಬದಿಯ ಕಮರಿಗೆ ಉರುಳಿದೆ.

ಶಾಲಾ ಬಸ್ನಲ್ಲಿ 17 ಮಂದಿ ವಿದ್ಯಾರ್ಥಿಗಳಿದ್ದು, ಇಬ್ಬರಿಗೆ ಗಂಭೀರ ಗಾಯವಾಗಿದೆ. ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಡಿಕ್ಕಿಯ ರಭಸಕ್ಕೆ ಬಸ್‌ ನಜ್ಜುಗುಜ್ಜಾಗಿದೆ, ಟೂರಿಸ್ಟ್‌ ವಾಹನದ ಚಾಲಕನಿಗೂ ಸಣ್ಣಪುಟ್ಟ ಗಾಯಗಳಾಗಿದೆ. ಗಾಯಾಳುಗಳನ್ನು ಮುಕ್ಕ ಖಾಸಗಿ ಆಸ್ಪತ್ತೆಗೆ ದಾಖಲಿಸಲಾಗಿದೆ. ಮಂಗಳೂರು ಉತ್ತರ ಸಂಚಾರ ಪೊಲೀಸ್‌ ರಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ :  ಟೆಂಪೋ ಹಾಗೂ 2 ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ – ಸ್ಕೂಟ‌ರ್ ಸವಾರ ಸಾವು

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಇವರ ನೂತನ ಉತ್ಪನ್ನ ನೂತನ ತಂತ್ರಜ್ಞಾನದ “ಲಕ್ಷ್ಮೀದ್ವಾರ” ಲೋಕಾರ್ಪಣೆ

ಟಾಪ್ ಸುದ್ದಿಗಳು

ಬೆಳ್ತಂಗಡಿ : ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ವತಿಯಿಂದ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ 7ನೇ ವರ್ಷದ ದೀಪಾವಳಿ ದೋಸೆ ಹಬ್ಬ-2026, ಸಹಸ್ರಾರು ಜನರು ಭಾಗಿ !