ಬೆಳ್ತಂಗಡಿ : ಕೊರಂಜ ಮತ್ತು ಮಚ್ಚಿನ ಶಾಲೆಗಳು ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗಿ ಪರಿವರ್ತನೆ – ಶಾಸಕ ಹರೀಶ್ ಪೂಂಜಾ

ಬೆಳ್ತಂಗಡಿ, ಜೂ. 03 :  ತಾಲೂಕಿನ ಕೊರಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಗೇರುಕಟ್ಟೆಯಾಗಿ ಹಾಗೂ ಮಚ್ಚಿನ ಸರ್ಕಾರಿ ಪ್ರೌಢಶಾಲೆಯನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಮಚ್ಚಿನವನ್ನಾಗಿ ಪರಿವರ್ತಿಸಲು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ ಎಂದು ಶಾಸಕ ಹರೀಶ್ ಪೂಂಜಾ ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಗ್ರಾಮೀಣ ಮಟ್ಟದಲ್ಲಿಯೇ ಒದಗಿಸುವ ಉದ್ದೇಶದಿಂದ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳಾಗಿ ಮೇಲ್ದರ್ಜೆಗೇರಿಸಲು ನಿರಂತರ ಪ್ರಯತ್ನ ಮಾಡಲಾಗಿತ್ತು. ಸರ್ಕಾರದ ಈ ಆದೇಶದಿಂದ ವಿದ್ಯಾರ್ಥಿಗಳಿಗೆ ಒಂದೇ ಆವರಣದಲ್ಲಿ ಸಮಗ್ರ ಶಿಕ್ಷಣ ಸೌಲಭ್ಯ, ಉತ್ತಮ ಶೈಕ್ಷಣಿಕ ವಾತಾವರಣ ಹಾಗೂ ಭವಿಷ್ಯಕ್ಕೆ ಪೂರಕವಾದ ಅವಕಾಶಗಳು ದೊರೆಯಲಿವೆ ಎಂದು ಶಾಸಕರು ತಿಳಿಸಿದ್ದಾರೆ.

ಈ ಮಹತ್ವದ ಬೇಡಿಕೆಯನ್ನು ಪರಿಗಣಿಸಿ ಆದೇಶ ಹೊರಡಿಸಿದ ಮಾನ್ಯ ಮುಖ್ಯಮಂತ್ರಿಗಳಿಗೆ ಶಿಕ್ಷಣ ಸಚಿವರಿಗೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಅವರು ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

ಇದು ಗ್ರಾಮೀಣ ಶಿಕ್ಷಣ ಕ್ಷೇತ್ರಕ್ಕೆ ಹೊಸ ದಿಕ್ಕು ನೀಡಲಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ (ರಿ.) ಕ್ಷೇತ್ರ ಸಮಿತಿ ಬೆಳ್ತಂಗಡಿ ವತಿಯಿಂದ “ಆಟಿದ ಕಮ್ಮೆನ ಬೊಕ್ಕಗೊಬ್ಬು”

ಟಾಪ್ ಸುದ್ದಿಗಳು, ವಿದೇಶ

ಟೋಕಿಯೋ : ಜಪಾನ್ ನಲ್ಲಿ 7.1 ತೀವ್ರತೆಯ ಪ್ರಬಲ ಭೂಕಂಪ – ಭೀಕರ ಸುನಾಮಿ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : ಖಾಸಗಿ ಬಸ್ – ಬೈಕ್ ಮಧ್ಯೆ ಅಪಘಾತ; ಪತಿ ಸಾವು, ಪತ್ನಿಗೆ ಗಂಭೀರ

⚠️ Contents are protected on this website.