ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಂಭ್ರಮ – ಶರತ್ ಕೃಷ್ಣಪಡೈಟ್ನಾಯರು

ಉಜಿರೆ, ಡಿ. 16 : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಉಜಿರೆ ವಿದ್ಯಾಮಂದಿರವು ಸುದೀರ್ಘ ಅವಧಿಯಲ್ಲಿ ಸಹಸ್ರಾರು ವಿದ್ಯಾರ್ಥಿಗಳಿಗೆ ವಿದ್ಯಾದಾನವಿತ್ತು ಸಮಾಜದ ಶ್ರೇಯಸ್ಸಿಗೆ ಮೇರುಕೊಡುಗೆಯನ್ನಿತ್ತು, ಇದೀಗ ಶತಮಾನೋತ್ಸವ ಸಂಭ್ರಮದಲ್ಲಿದೆ. ಶಾಲೆಯ ಶತಮಾನೋತ್ಸವವು ಅತ್ಯಂತ ಸಂಭ್ರಮದಿಂದ ಜರುಗಲಿದೆ ಎಂದು ಶತಮಾನೋತ್ಸವ ಸಮಿತಿ ಅಧ್ಯಕ್ಷರಾದ ಶ್ರೀ ಶರತ್ ಕೃಷ್ಣಪಡೈಟ್ನಾಯರು ಮಾಹಿತಿ ನೀಡಿದ್ದಾರೆ.

Advertisement

ಉಜಿರೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ಈ ಶಾಲೆಯಲ್ಲಿ ಕಲಿಯುತ್ತಿರುವ ಮಕ್ಕಳಿಗೆ ಸಿಗುತ್ತಿರುವ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ.ಧ.ಮಂ.ಶಿಕ್ಷಣ ಸಂಸ್ಥೆ(ರಿ) ಉಜಿರೆ ಪೂರೈಸುತ್ತಿದ್ದು, ಈ ಶತಮಾನೋತ್ಸವ ಸಂದರ್ಭದಲ್ಲಿ ಚಿಣ್ಣರ ಆಟದ ಮನೆ, ಶಾಲೆಯ ನವೀಕರಣ, ನೂತನ ಶೌಚಾಲಯ, ಇಂಟರ್ಲಾಕ್ ಅಳವಡಿಕೆ ಮುಂತಾದ ಕಾಮಗಾರಿಗಳು ಸುಮಾರು 80 ಲಕ್ಷದಲ್ಲಿ ಆಡಳಿತ ಮಂಡಳಿಯು ಒದಗಿಸಿದೆ ಎಂದರು.

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಾ| ಸತೀಶ್ಚಂದ್ರ ಎಸ್ ಮಾತನಾಡಿ, ಶತಮಾನೋತ್ಸವ ಸಮಿತಿಯ ವತಿಯಿಂದ ನೂತನವಾಗಿ ನಿರ್ಮಿಸಲಾದ ಸುಸಜ್ಜಿತವಾದ ಗ್ರಂಥಾಲಯ ಉದ್ಘಾಟನೆಗೆ ಸಿದ್ಧಗೊಂಡಿದೆ. ದಿನಾಂಕ 19/12/2025ರಂದು ಪೂರ್ವಾಹ್ನ ಸಮಯ 11.00 ರಿಂದ ಶ್ರೀ ಶರತ್ ಕೃಷ್ಣ ಪನ್ವೆಟ್ನಾಯರ ಅಧ್ಯಕ್ಷತೆಯಲ್ಲಿ, ಶ್ರೀ ಡಿ. ಹರ್ಷೇಂದ್ರಕುಮಾರ್ ಕಾರ್ಯದರ್ಶಿಗಳು ಶ್ರೀ.ಧ.ಮಂ.ಶಿಕ್ಷಣ ಸಂಸ್ಥೆ(ರಿ) ಉಜಿರೆ, ಕಾರ್ಯಕ್ರಮ ಉದ್ಘಾಟಿಸಲಿರುವರು. ವಿಶೇಷ ಅಭ್ಯಾಗತರಾಗಿ ಶ್ರೀಮತಿ ಉಷಾಕಿರಣ್ ಕಾರಂತ್ ಅಧ್ಯಕ್ಷರು, ಗ್ರಾ.ಪ ಉಜಿರೆ. ಶ್ರೀಮತಿ ತಾರಕೇಸರಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಬೆಳ್ತಂಗಡಿ. ಡಾ. ಔದ್ರಮ ಕೆ.ಎ.ಎಸ್ ಕುಲಸಚಿವರು ಬಾಗಲಕೋಟೆ ವಿಶ್ವವಿದ್ಯಾನಿಲಯ, ಶ್ರೀ ಶೇಕ್ ಲತೀಫ್, ಕೆ.ಎ.ಎಸ್. ವ್ಯವಸ್ಥಾಪಕ ನಿರ್ದೇಶಕರು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು ಇವರು ಭಾಗವಹಿಸಲಿರುವರು.

20-12-2025 ಶನಿವಾರದಂದು ಸಂಜೆ ಸಮಯ 4.30ರಿಂದ ಪೂಜ್ಯ ಡಾ। ಶ್ರೀ ಡಿ.ವೀರೇಂದ್ರ ಹೆಗ್ಗಡೆಯವರ ಶುಭಾರ್ಶೀವಾದದೊಂದಿಗೆ, ಸನ್ಮಾನ್ಯ ಯು.ಟಿ.ಖಾದರ್ ಫರೀದ್, ಸನ್ಮಾನ್ಯ ಶ್ರೀ ದಿನೇಶ್ ಗುಂಡೂರಾವ್,,ಸನ್ಮಾನ್ಯ ಶ್ರೀ ಮಧುಬಂಗಾರಪ್ಪ, ಸನ್ಮಾನ್ಯ ಶ್ರೀ ಹರೀಶ್ ಪೂಂಜ, ಮಾನ್ಯ ಸಂಸದರು ವಿಧಾನ ಪರಿಷತ್ ಸದಸ್ಯರು, ಉಜಿರೆ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಗಣ್ಯರ ಉಪಸ್ಥಿತಿಯಲ್ಲಿ ನಿವೃತ್ತ ಮತ್ತು ಪ್ರವೃತ್ತ ಶಿಕ್ಷಕರನ್ನು ಆಡಳಿತ ಮಂಡಳಿಯು ಗೌರವಿಸುವ ಕಾರ್ಯಕ್ರಮ ಜರಗಲಿದೆ ಎಂದರು.

ಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರಿಂದ ಸಾಂಸ್ಕೃತಿಕ ಕಾರ್ಯಕ್ರಮ, ಎಸ್.ಡಿ.ಎಂ ಕಲಾವೈಭವ, ಮಂದಾರ ಕಲಾವಿದರು ಉಜಿರೆ ಇವರಿಂದ ತುಳುನಾಟಕ , ಸಂಸ್ಥೆಯ ಹಿರಿಯ ವಿದ್ಯಾರ್ಥಿ ರಜತ್ ಮೈಯರವರಿಂದ ಸಂಗೀತ ಕಾರ್ಯಕ್ರಮ ನಡೆಯಲಿವೆ ಎಂದು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಬಾಲಕೃಷ್ಣ ನಾಯ್ಕ ತಿಳಿಸಿದರು.

ಈ ಸಂದರ್ಭದಲ್ಲಿ ಶ್ರೀ ಧನ್ಯಕುಮಾರ್ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀ.ಧ.ಮಂ.ಶಿಕ್ಷಣ ಸಂಸ್ಥೆ (ರಿ), ಶ್ರೀ ಶಾಲಾ ಶತಮಾನೋತ್ಸವ ಸಮಿತಿ ಕಾರ್ಯದರ್ಶಿಗಳಾದ ಶ್ರೀ ಅಬೂಬಕ್ಕರ್, ಕಾರ್ಯಕ್ರಮ ಸಂಯೋಜಕರು ಶ್ರೀ ಬಿ.ಸೋಮಶೇಖರ ಶೆಟ್ಟಿ, ಕೋಶಾಧಿಕಾರಿ ಶ್ರೀ ಮೋಹನ್ ಶೆಟ್ಟಿಗಾರ್ ಹಾಗೂ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ಅಬೂಬಕ್ಕರ್ ಉಪಸ್ಥಿತರಿದ್ದರು.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಮಡಿಕೇರಿ : ನಾಪತ್ತೆಯಾಗಿದ್ದ ಹಿಂದೂ ತಾಯಿ, ಮಗು – ಕೇರಳದ ಮದರಸವೊಂದರಲ್ಲಿ ಪತ್ತೆ ! ಲವ್ ಜಿಹಾದ್‌ ಆರೋಪ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಾಯ್ ಫ್ರೆಂಡ್ ಜೊತೆ ಸಲುಗೆಯಿಂದಿದ್ದಳು ಎಂದು ಸ್ನೇಹಿತೆಯ ಖಾಸಗಿ ಫೊಟೋ ವೈರಲ್ – ಶ್ವೇತಾ ಅರೆಸ್ಟ್ !

ಟಾಪ್ ಸುದ್ದಿಗಳು, ತಾಲೂಕು, ಪುತ್ತೂರು

ಪುತ್ತೂರು : ಶಿರಾಡಿ ಘಾಟಿ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ ಮತ್ತು ರೈಲ್ವೇ ಹಳಿ ಅಭಿವೃದ್ಧಿಗೆ ಜಂಟಿ ಸಮೀಕ್ಷೆ – ಕ್ಯಾ. ಚೌಟ

⚠️ Contents are protected on this website.