ಮುಂಡಾಜೆ : ಸೀಟ್ ಕಾಡು ಬಳಿ ಭೀಕರ ರಸ್ತೆ ಅಪಘಾತ – ಆರು ಮಂದಿಗೆ ಗಾಯ

ಮುಂಡಾಜೆ, ಜು. 9 : ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಆರು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಚಾರ್ಮಾಡಿ-ಉಜಿರೆ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟ್ ಕಾಡ್ ಬಳಿ ಇಂದು ಬೆಳಿಗ್ಗೆ ಸಂಭವಿಸಿದೆ.

Advertisement

ಜು. 9 ರಂದು ಬೆಳಿಗ್ಗೆ ಚಾರ್ಮಾಡಿ-ಉಜಿರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ಎರಡು ಕಾರುಗಳು ಸೀಟ್ ಕಾಡ್ ಬಳಿ ಪರಸ್ಪರ ಡಿಕ್ಕಿ ಹೊಡೆದಿವೆ. ಅಪಘಾತದ ತೀವ್ರತೆಗೆ ಎರಡೂ ಕಾರುಗಳು ಸಂಪೂರ್ಣ ನಜ್ಜುಗುಜ್ಜಾಗಿವೆ.

ಅಪಘಾತದಲ್ಲಿ ಗಾಯಗೊಂಡಿರುವ ಗಾಯಾಳುಗಳನ್ನು ಮಂಗಳೂರು ಕಾವೂರು ಮೂಲದ ವಿನಿತಾ (22), ಗೌರಮ್ಮ (49) ಮತ್ತು ಕೊಟ್ರೆಗೌಡ (55) ಹಾಗೂ ಯಾದಗಿರಿ ಜಿಲ್ಲೆಯ ಸುರಪುರ ಮೂಲದವರಾದ ಭೀಮಣ್ಣ (65), ಶ್ರೀನಿವಾಸ (32) ಮತ್ತು ಶಶಿಧರ (33) ಎಂದು ಗುರುತಿಸಲಾಗಿದೆ. ಗಾಯಾಳುಗಳ ಚಿಕಿತ್ಸೆ ಮತ್ತು ಆರೋಗ್ಯ ಸ್ಥಿತಿ ಅಪಘಾತದ ನಂತರ ಸ್ಥಳೀಯರು ಕೂಡಲೇ ರಕ್ಷಣಾ ಕಾರ್ಯದಲ್ಲಿ ನೆರವಾಗಿದ್ದಾರೆ.

ಗಾಯಾಳುಗಳನ್ನು ತಕ್ಷಣವೇ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್, ಗಾಯಾಳುಗಳ ಪೈಕಿ ಯಾರಿಗೂ ಪ್ರಾಣಾಪಾಯವಿಲ್ಲ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

⚠️ Contents are protected on this website.