ವಿಶಾಖಪಟ್ಟಣಂ : ಸೆಲ್ಫಿ ಕ್ರೇಝ್ ಗೆ ಮೂವರು ಯುವತಿಯರು ದುರಂತ ಅಂತ್ಯ !

ವಿಶಾಖಪಟ್ಟಣಂ, ಏ. 10 : ಪ್ರಕೃತಿಯ ಸೌಂದರ್ಯವನ್ನು ಕ್ಯಾಮರಾದಲ್ಲಿ ಸೆರೆಹಿಡಿಯಲು ಹೋದ ಮೂವರು ಯುವತಿಯರು ಜಲಪಾತದ ಸುಳಿಗೆ ಸಿಲುಕಿ ಮೃತಪಟ್ಟಿರುವ ಘೋರ ಘಟನೆ ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮರಾಜು ಜಿಲ್ಲೆಯಲ್ಲಿ ನಡೆದಿದೆ.

Advertisement

ಮೃತರನ್ನು ತ್ರಿಶಾ (17), ರತ್ನಕುಮಾರಿ (16) ಮತ್ತು ಪವಿತ್ರಾ (16) ಎಂದು ಗುರುತಿಸಲಾಗಿದೆ.

ಜಿಲ್ಲೆಯ ಜಂಬುವಲಸ ಗ್ರಾಮದ ನಾಲ್ವರು ಯುವತಿಯರು ಬೇಸಿಗೆ ರಜೆಯ ಹಿನ್ನೆಲೆಯಲ್ಲಿ ಮುಲುಗುಮ್ಮಿ ಜಲಪಾತಕ್ಕೆ ಪ್ರವಾಸ ಹೋಗಿದ್ದರು. ಜಲಪಾತದ ಬಳಿ ಆಟವಾಡುತ್ತಾ ಫೋಟೋ ಹಾಗೂ ಸೆಲ್ಪಿ ತೆಗೆದುಕೊಳ್ಳಲು ಮುಂದಾದಾಗ ಈ ದುರ್ಘಟನೆ ಸಂಭವಿಸಿದೆ. ಕಲ್ಲಿನ ಮೇಲೆ ನಿಂತು ಸೆಲ್ಸಿ ತೆಗೆದುಕೊಳ್ಳುವಾಗ ಆಯತಪ್ಪಿ ಮೂವರು ನೀರಿಗೆ ಬಿದ್ದಿದ್ದಾರೆ.

ಮೊದಲು ನೀರಿನಲ್ಲಿ ಆಟವಾಡುತ್ತಾ ನಗುತ್ತಿದ್ದ ಯುವತಿಯರು, ಕ್ಷಣಾರ್ಧದಲ್ಲೇ ಪ್ರಾಣ ಉಳಿಸಿಕೊಳ್ಳಲು ಕಿರುಚಾಡತೊಡಗಿದರು. ನೀರಿನ ಸೆಳೆತ ಹೆಚ್ಚಿದ್ದರಿಂದ ಹಾಗೂ ಈಜು ಬಾರದ ಕಾರಣ ಅವರು ನೀರಿನಲ್ಲಿ ಮುಳುಗಿದ್ದಾರೆ. ಘಟನೆ ನಡೆದ ತಕ್ಷಣ ಸ್ಥಳೀಯರು ಧಾವಿಸಿ ಬಂದು ನಾಲ್ವರ ಪೈಕಿ ಓರ್ವ ಯುವತಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಆಕೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ರಕ್ಷಣಾ ತಂಡ ಕಾರ್ಯಾಚರಣೆ ನಡೆಸಿ ನೀರು ಪಾಲಾಗಿದ್ದ ಮೂವರು ಯುವತಿಯರ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.