ಮಂಗಳೂರು : ಕನ್ಯಾಡಿ ಸೇವಾಭಾರತಿಯಿಂದ ಮೆಸ್ಕಾಂ ಅಧ್ಯಕ್ಷರಾದ ಹರೀಶ್ ಕುಮಾರ್ ಭೇಟಿ

ಮಂಗಳೂರು : ಸೇವಾಧಾಮದ ಸಂಸ್ಥಾಪಕರಾದ ಕೆ ವಿನಾಯಕ ರಾವ್ ಮತ್ತು ತಂಡದವರು ಮೆಸ್ಕಾಂ ಅಧ್ಯಕ್ಷರಾದ ಕೆ ಹರೀಶ್ ಕುಮಾರ್ ರವರನ್ನು ಭೇಟಿ ನೀಡಿ ಸೇವಾಭಾರತಿಯ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ CSR ಅನುದಾನವನ್ನು ಒದಗಿಸಿಕೊಡುವಂತೆ ಮನವಿ ಮಾಡಲಾಯಿತು.

Advertisement

ಈ ಸಂದರ್ಭದಲ್ಲಿ ಮೆಸ್ಕಾಂ ಅಧ್ಯಕ್ಷರಿಗೆ ಸೇವಾಭಾರತಿಯ ಸೇವಾ ಕಾರ್ಯಗಳ ಬಗ್ಗೆ ಮಾಹಿತಿಯನ್ನು ಸೇವಾಧಾಮದ ಸಂಸ್ಥಾಪಕರಾದ ಶ್ರೀ ಕೆ ವಿನಾಯಕ ರಾವ್ ನೀಡಿದರು. ಅಲ್ಲದೆ, ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡದ ಬಗ್ಗೆಯೂ ಮಾಹಿತಿ ನೀಡಿ ಅನುದಾನ ಒದಗಿಸಿಕೊಡುವ ಬಗ್ಗೆ ಚರ್ಚಿಸಲಾಯಿತು. ಇನ್ನು, ಹರೀಶ್ ಕುಮಾರ್ ರವರು ಸೇವಾಭಾರತಿಯ ಮನವಿಗೆ ಸೂಕ್ತ ಭರವಸೆಯನ್ನು ಇದೇ ಸಂದರ್ಭದಲ್ಲಿ ನೀಡಿದರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಸಚಿವ ಸ್ಥಾನಕ್ಕಾಗಿ ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ 31 ಶಾಸಕರಿಂದ ಪತ್ರ – ಕೈ ಪಾಳಯದಲ್ಲಿ “ಪತ್ರ ಸ್ಫೋಟ”

ಟಾಪ್ ಸುದ್ದಿಗಳು, ರಾಜ್ಯ / ದೇಶ

ತಮಿಳುನಾಡು : ಎಐಎಡಿಎಂಕೆ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ 10,000 ರೂ. ಘೋಷಣೆ !

ವಿದೇಶ

ಅಮೆರಿಕದಲ್ಲಿ ಭಾರಿ ಹಿಮಪಾತ: 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು, ಶಾಲೆಗಳಿಗೆ ರಜೆ

⚠️ Contents are protected on this website.