ಮುಂಬೈ : ಟೀಂ ಇಂಡಿಯಾದ ವೇಗದ ಬೌಲರ್‌ ಮೊಹಮ್ಮದ್‌ ಶಮಿ ಅಂತಾರಾಷ್ಟ್ರೀಯ ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ !

ಮುಂಬೈ, ನ. 07 : ಟೀಂ ಇಂಡಿಯಾದ ವೇಗದ ಬೌಲರ್‌ ಮೊಹಮ್ಮದ್‌ ಶಮಿ ಅಂತಾರಾಷ್ಟ್ರೀಯ ಟೆಸ್ಟ್‌ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.

ಈ ಕುರಿತು ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಭಾವುಕ ಸಂದೇಶವೊಂದನ್ನೂ ಹಂಚಿಕೊಂಡಿದ್ದಾರೆ. ಭಾರತದ ಟೆಸ್ಟ್ ಜೆರ್ಸಿ ತೊಟ್ಟ ಮೊದಲ ದಿನದ ನೆನಪನ್ನು ಮೆಲುಕು ಹಾಕಿರುವ 35 ವರ್ಷದ ಶಮಿ, ತಮ್ಮ ಕ್ರಿಕೆಟ್  ಪಯಣದಲ್ಲಿ ಬೆಂಬಲವಾಗಿ ನಿಂತ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ.

ʻಮೊದಲ ಬಾರಿಗೆ ಭಾರತದ ಟೆಸ್ಟ್ ಜೆರ್ಸಿ ಧರಿಸಿದಾಗ ನನ್ನ ಮನಸ್ಸಿನಲ್ಲಿ ಒಂದೇ ಒಂದು ಕನಸಿತ್ತು. ನನ್ನ ದೇಶಕ್ಕಾಗಿ ಏನಾದರೂ ಸಾಧನೆ ಮಾಡಬೇಕು ಎಂಬುದಾಗಿತ್ತು. ಪ್ರತಿ ವಿಕೆಟ್, ಹೋರಾಟ, ಗಾಯ ಮತ್ತು ಪುನರಾಗಮನ ತಮಗೆ ಅಮೂಲ್ಯ ಪಾಠಗಳನ್ನು ಕಲಿಸಿವೆ. ಟೆಸ್ಟ್ ಕ್ರಿಕೆಟ್ ಕೇವಲ ಒಂದು ಮಾದರಿಯ ಆಟವಾಗಿರಲಿಲ್ಲ, ಅದು ತಮ್ಮ ಜೀವನದ ಅತ್ಯಂತ ವಿಶೇಷ ಭಾಗವಾಗಿತ್ತುʼ ಎಂದು ಶಮಿ ತಮ್ಮ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ʻಅಸಂಖ್ಯಾತ ಸವಿನೆನಪುಗಳೊಂದಿಗೆ ಭಾರವಾದ ಹೃದಯದಿಂದ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳುತ್ತಿದ್ದೇನೆ. ನನ್ನ ಸಹ ಆಟಗಾರರು, ಕೋಚ್‌ಗಳು, ಕುಟುಂಬದವರು ಹಾಗೂ ಕಷ್ಟದ ಸಮಯದಲ್ಲಿಯೂ ನನ್ನ ಮೇಲೆ ನಂಬಿಕೆ ಇಟ್ಟಿದ್ದ ಕೋಟ್ಯಂತರ ಭಾರತೀಯ ಅಭಿಮಾನಿಗಳಿಗೆ ಧನ್ಯವಾದಗಳುʼ ಎಂದು ಶಮಿ ತಮ್ಮ ಭಾವುಕ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಜೊತೆಗೆ ತಮ್ಮ ಪ್ರತಿಭೆಯನ್ನು ಗುರುತಿಸಿ ಅವಕಾಶ ನೀಡಿದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಹಾಗೂ ಬಂಗಾಳ ಕ್ರಿಕೆಟ್ ಸಂಸ್ಥೆಗೂ ಶಮಿ ವಿಶೇಷ ಧನ್ಯವಾದ ಸಲ್ಲಿಸಿದ್ದಾರೆ.

ಟೆಸ್ಟ್‌ ಕ್ರಿಕೆಟ್‌ನಲ್ಲಿ ಶಮಿ ಸಾಧನೆ
ಮೊಹಮ್ಮದ್ ಶಮಿ 2013ರ ನವೆಂಬರ್‌ನಲ್ಲಿ ಟೆಸ್ಟ್‌ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ಬಳಿಕ ಭಾರತ ತಂಡದ ಪರ 64 ಟೆಸ್ಟ್ ಪಂದ್ಯಗಳನ್ನ ಆಡಿರುವ ಶಮಿ ಒಟ್ಟು 229 ವಿಕೆಟ್‌ಗಳನ್ನು ಗಳಿಸಿದ್ದಾರೆ. 27.71ರ ಸರಾಸರಿಯಲ್ಲಿ ವಿಕೆಟ್ ಪಡೆದಿರುವ ಶಮಿ, 6 ಬಾರಿ 5 ವಿಕೆಟ್‌ಗಳ ಗೊಂಚಲು ಸಾಧನೆ ಮಾಡಿದ್ದಾರೆ. ಇಂಗ್ಲೆಂಡ್ ವಿರುದ್ಧ 56 ರನ್‌ಗಳಿಗೆ 6 ವಿಕೆಟ್ ಪಡೆದಿರುವುದು ಟೆಸ್ಟ್ ಕ್ರಿಕೆಟ್‌ನಲ್ಲಿ ಅವರ ಅತ್ಯುತ್ತಮ ಬೌಲಿಂಗ್ ಪ್ರದರ್ಶನವಾಗಿದೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ :  ಟೆಂಪೋ ಹಾಗೂ 2 ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ – ಸ್ಕೂಟ‌ರ್ ಸವಾರ ಸಾವು

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಇವರ ನೂತನ ಉತ್ಪನ್ನ ನೂತನ ತಂತ್ರಜ್ಞಾನದ “ಲಕ್ಷ್ಮೀದ್ವಾರ” ಲೋಕಾರ್ಪಣೆ

ಟಾಪ್ ಸುದ್ದಿಗಳು

ಬೆಳ್ತಂಗಡಿ : ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ವತಿಯಿಂದ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ 7ನೇ ವರ್ಷದ ದೀಪಾವಳಿ ದೋಸೆ ಹಬ್ಬ-2026, ಸಹಸ್ರಾರು ಜನರು ಭಾಗಿ !