ಮುಂಬೈ : ದೇಶದ ವಿಚಾರ ಬಂದಾಗ ರಾಜಕೀಯಕ್ಕಿಂತ ದೇಶದ ಹಿತಾಸಕ್ತಿ ಮುಖ್ಯ, ಮೋದಿ ಭಾರತದ ಘನತೆ ಎತ್ತಿ ಹಿಡಿದಿದ್ದಾರೆ – ಶರದ್ ಪವಾರ್ !

ಮುಂಬೈ, ಮೇ 20 : ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶ ಪ್ರವಾಸದ ಬಗ್ಗೆ ವಿರೋಧ ಪಕ್ಷಗಳ ಟೀಕೆಗಳ ನಡುವೆಯೂ, ಭಾರತದ ಪ್ರತಿಷ್ಠೆಯನ್ನು ರಕ್ಷಿಸುವಲ್ಲಿ ರಾಜಕೀಯ ಭಿನ್ನಾಭಿಪ್ರಾಯಗಳು ಅಡ್ಡಿಯಾಗಬಾರದು ಎಂದು ಹಿರಿಯ ರಾಜಕಾರಣಿ ಮತ್ತು ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದಲ್ಲಿ ವಿಪಕ್ಷ ಇಂಡಿಯಾ ಬ್ಲಾಕ್ ನ ಕಾಂಗ್ರೆಸ್ ಟೀಕಾ ಪ್ರಹಾರ ನಡೆಸುತ್ತಿರುವ ಸಂದರ್ಭದಲ್ಲೇ ಪವಾರ್ ಈ ಪ್ರತಿಕ್ರಿಯೆ ನೀಡಿದ್ದಾರೆ.

Advertisement

ರಾಜಕೀಯ ಭಿನ್ನಾಭಿಪ್ರಾಯದ ಹೊರತಾಗಿಯೂ ದೇಶದ ವಿಚಾರ ಬಂದಾಗ ರಾಜಕೀಯಕ್ಕಿಂತ ದೇಶದ ಹಿತಾಸಕ್ತಿ, ಗೌರವ ಮುಖ್ಯವಾದದ್ದು, ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶದಲ್ಲಿ ಭಾರತದ ಘನತೆಯನ್ನು ಎತ್ತಿಹಿಡಿದಿರುವುದಾಗಿ ತಿಳಿಸಿದ್ದಾರೆ. “ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶದಲ್ಲಿ ದೇಶದ ಪ್ರತಿಷ್ಠೆಯನ್ನು ಹೆಚ್ಚಿಸುವ ಕೆಲಸ ಮಾಡುತ್ತಿದ್ದಾರೆ. ರಾಜಕೀಯವಾಗಿ ನಮ್ಮಲ್ಲಿ ಭಿನ್ನ ದೃಷ್ಟಿಕೋನ ಹೊಂದಿರಬಹುದು. ಆದರೆ ದೇಶದ ಗೌರವದ ವಿಷಯ ಬಂದಾಗ, ನಾವು ರಾಜಕೀಯವನ್ನು ಎಳೆದು ತರಬಾರದು ಎಂದು ಪವಾರ್” ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ದೇಶದ ಹಿತಾಸಕ್ತಿ ವಿಚಾರದಲ್ಲಿ ರಾಜಕೀಯ ಪಕ್ಷಗಳು ರಾಜಕೀಯ ಮರೆತು ಒಗ್ಗಟ್ಟಾಗಿ ಕಾರ್ಯನಿರ್ವಹಿಸಬೇಕು. ಇದರೊಂದಿಗೆ ಜಾಗತಿಕವಾಗಿ ಭಾರತವನ್ನು ಸಶಕ್ತಗೊಳಿಸಬೇಕು ಎಂದು ಪವಾರ್ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಐದು ದೇಶಗಳ ವಿದೇಶ ಪ್ರವಾಸ ಕೈಗೊಂಡಿರುವ ಕುರಿತು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ ಬೆನ್ನಲ್ಲೇ ಶರತ್ ಪವಾರ್ ಅವರು ಈ ಹೇಳಿಕೆ ಹೊರಬಿದ್ದಿದೆ.
ಜಾಗತಿಕ ಸಂಘರ್ಷದ ಸಂದರ್ಭದಲ್ಲಿ ದೇಶದ ನಾಗಕರಿಕರು ಒಂದು ವರ್ಷಗಳ ಕಾಲ ಚಿನ್ನ ಖರೀದಿಸಬೇಡಿ, ವಿದೇಶ ಪ್ರವಾಸ ಕೈಗೊಳ್ಳಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮನವಿಕೊಂಡಿದ್ದರು… ಆದರೆ ಇದೀಗ ಪ್ರಧಾನಿಯವರೇ ಐದು ದೇಶಗಳ ಪ್ರವಾಸ ಕೈಗೊಂಡಿದ್ದಾರೆಂದು ವರದಿ ತಿಳಿಸಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.