ಮಂಗಳೂರು : ಮಂಗಳೂರು ವಿವಿ’ಯಲ್ಲಿ ನಾಳೆ ಬ್ರಹ್ಮಶ್ರೀ ನಾರಾಯಣ ಗುರು ಮತ್ತು ಮಹಾತ್ಮಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವ

ಮಂಗಳೂರು, ಡಿ. 02 : ಕೇರಳದ ವರ್ಕಳದ ಶಿವಗಿರಿ ಮಠ, ವರ್ಕಲ ಶ್ರೀ ನಾರಾಯಣ ಗುರು ಅಧ್ಯಯನ ಪೀಠ, ಮಂಗಳೂರು ವಿಶ್ವವಿದ್ಯಾನಿಲಯ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಮತ್ತು ಮಹಾತ್ಮಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವದ ಅಂಗವಾಗಿ ಡಿ.೩ರಂದು ಕೊಣಾಜೆ ಮಂಗಳಗಂಗೋತ್ರಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಶ್ರೀಮಹಾಗುರುವಿನ ಮಹಾ ಸಮಾಧಿ ಶತಾಬಿ ಸರ್ವಮತ ಸಮ್ಮೇಳನ ಶತಮಾನೋತ್ಸವ ಜರುಗಲಿದೆ. ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ.

Advertisement

ಬೆಳಗ್ಗೆ 09:30ಕ್ಕೆ ನಡೆಯುವ ಉದ್ಘಾಟನಾ ಕಾರ್ಯಕ್ರಮದಲ್ಲಿ ವರ್ಕಲ ಶಿವಗಿರಿ ಮಠದ ಪೀಠಾಧಿಪತಿ ಬ್ರಹ್ಮಶ್ರೀ ಸಚ್ಚಿದಾನಂದ ಸ್ವಾಮಿ ಆಶೀರ್ವಚನವನ್ನು ನೀಡಲಿದ್ದಾರೆ. ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಸಭೆಯ ಅಧ್ಯಕ್ಷ ತೆ ವಹಿಸಲಿದ್ದಾರೆ. ಲೋಕಸಭೆಯ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷ ಕೆ.ಸಿ.ವೇಣುಗೋಪಾಲ್ ಬ್ರಹ್ಮಶ್ರೀ ನಾರಾಯಣ ಗುರು ಮತ್ತು ಗಾಂಧಿ ಸಮಾಗಮ ಸಂದೇಶದ ಪ್ರಧಾನ ಭಾಷಣ, ಶಿವಗಿರಿ ಮಠದ ಕಾರ್ಯದರ್ಶಿ ಸ್ವಾಮೀಜಿ ಶುಭಾಂಗಾನಂದ ಪರಿನಿರ್ವಾಣ ಸಂದೇಶ ಭಾಷಣ ಮಾಡಲಿದ್ದಾರೆ. ಶಿವಗಿರಿ ಮಠದ ಶಾರದಾನಂದ, ಸ್ವಾಮಿ ರಿತಾಂಭರಾನಂದ, ಸ್ವಾಮಿ ಆಸಂಗಾನಂದ ಗಿರಿ, ಮಂಗಳೂರು ರಾಮಕೃಷ್ಣ ಮಠದ ಸ್ವಾಮಿ ಜಿತಕಾನಂದಜಿ ಮಹಾರಾಜ ಉಪಸ್ಥಿತರಿರಲಿದ್ದಾರೆ.

ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ, ಸಚಿವರಾದ ಡಾ.ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಝಮೀರ್ ಅಹ್ಮದ್ ಖಾನ್, ದಿನೇಶ್ ಗುಂಡೂರಾವ್, ಲಕ್ಷ್ಮೀ ಹೆಬ್ಬಾಳ್ಳರ್, ಮಂಗಳೂರು ವಿವಿ ಕುಲಪತಿಪ್ರೊ.ಪಿ.ಎಲ್.ಧರ್ಮ, ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಕ್ಯಾಬ್ರಿಜೇಶ್ ಚೌಟ, ಮಾಜಿ ಸಚಿವ ವಿನಯಕುಮಾರ್ ಸೊರಕೆ ಗೌರವ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಪಾಣಕ್ಕಾಡ್ ಮುನವ್ವರ್ ಅಲಿ ತಂಜಳ್, ಮಂಗಳೂರು ಬಿಷಪ್ ಡಾ.ಪೀಟರ್ ಪಾಲ್ ಸಲ್ಮಾನ, ಬೆಳ್ತಂಗಡಿ ಬಿಷಪ್ ಜೇಮ್ಸ್ ಪಟ್ಟೆರಿಲ್, ಬ್ರಹ್ಮಕುಮಾರಿ ವೀಣಾ ಬೆಹನ್‌ಜಿ, ಗೋಕುಲಂ ಗ್ರೂಪ್ ಅಧ್ಯಕ್ಷ ಗೋಕುಲ್, ಗೋಪಾಲನ್, ಕೆ.ಜಿ.ಬಾಬು ರಾಜ್ ಬಹರೈನ್, ರಾಜಧಾನಿ ಗ್ರೂಪ್ ಅಧ್ಯಕ್ಷ ಡಾ.ಬಿಜು ರಮೇಶ್, ಮೆಡಿಮಿಕ್ಸ್ ಅಧ್ಯಕ್ಷ ಎ.ವಿ.ಅನೂಪ್, ಕೇರಳದ ಮಾಜಿ ಡಿಜಿಪಿ ಟಿ.ಪಿ.ಸೆನ್‌ಕುಮಾ‌ರ್, ಶಾಸಕರಾದ ವಿ.ಸುನೀಲ್ ಕುಮಾರ್, ಉಮಾನಾಥ ಎ. ಕೋಟ್ಯಾನ್ ಮತ್ತು ಕೊಣಾಜೆ ಗ್ರಾಪಂ ಅಧ್ಯಕ್ಷೆ ಗೀತಾ ಡಿ. ಕುಂದರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಸರ್ವಮತ ಸಮ್ಮೇಳನ : ಅಪರಾಹ್ನ 02ರಿಂದ 04ರವರೆಗೆ ಸರ್ವಮತ ಸಮ್ಮೇಳನ ನಡೆಯಲಿದೆ. ಖ್ಯಾತ ಸಂಸ್ಕೃತಿ ಚಿಂತಕ ಗಣೇಶದೇವಿ ಸಮ್ಮೇಳನ ಉದ್ಘಾಟಿಸುವರು. ವಿಧಾನ ಪರಿಷತ್ ಸದಸ್ಯ ಮತ್ತು ಕಾರ್ಯಕ್ರಮದ ಕೇಂದ್ರ ಸಮಿತಿಯ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‌ ಅಧ್ಯಕ್ಷತೆಯಲ್ಲಿ ಶಿವಗಿರಿ ಮಠದ ಸ್ವಾಮಿ ರಿತಾಂಭರಾನಂದ ಸರ್ವಮತ ಸಂದೇಶ ಭಾಷಣ ನೀಡಲಿದ್ದಾರೆ.

ಈ ಎಲ್ಲಾ ಕಾರ್ಯಕ್ರಮಗಳು ನಿಮ್ಮ ನೆಚ್ಚಿನ “ಧ್ವನಿ ನ್ಯೂಸ್” ಯೂಟ್ಯೂಬ್ ಚಾನೆಲ್ ನಲ್ಲಿ ನೇರಪ್ರಸಾರಗೊಳ್ಳಲಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಲಘು ಮಳೆ- 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು: ಪಾಂಡೇಶ್ವರ ಅಗ್ನಿಶಾಮಕ ಚಾಲಕ ಕಾರ್ತಿಕ್‌ ಗೆ ಮುಖ್ಯಮಂತ್ರಿಗಳ ಚಿನ್ನದ ಪದಕ

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಹಾರಾಷ್ಟ್ರದಲ್ಲಿ ರಸ್ತೆ ಅಪಘಾತ- ಮಂಗಳೂರು ಮೂಲದ ಯುವ ಟ್ರಕ್ ಚಾಲಕ ಸಾವು

⚠️ Contents are protected on this website.