ಮಡಿಕೇರಿ : ತಡಿಯಂಡಮೋಳ್ ಬೆಟ್ಟದಲ್ಲಿ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ 4 ದಿನಗಳ ಬಳಿಕ ಪತ್ತೆ !

ಮಡಿಕೇರಿ, ಏ. 06 : ತಡಿಯಂಡಮೋಳ್ ಬೆಟ್ಟದಲ್ಲಿ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ(36) ಕೊನೆಗೂ ಪತ್ತೆಯಾಗಿದ್ದಾರೆ.

ತಡಿಯಂಡಮೋಳ್ ಬೆಟ್ಟಕ್ಕೆ ಗುರುವಾರ ಬೆಳಗ್ಗೆ ಚಾರಣಕ್ಕೆ ತೆರಳಿದ್ದ ಶರಣ್ಯ ನಾಪತ್ತೆಯಾಗಿದ್ದರು. ಅರಣ್ಯ, ಪೊಲೀಸ್, ಇಲಾಖೆ, ಗ್ರಾಮಸ್ಥರು ನಕ್ಸಲ್ ನಿಗ್ರಹ ಪಡೆಯಿಂದ ನಿರಂತರ ಶೋಧ ಕಾರ್ಯ ನಡೆಸಲಾಗಿತ್ತು. ಕೊನೆಗೂ 4 ದಿನಗಳ ಸತತ ಹುಡುಕಾಟದ ಬಳಿಕ ಭಾನುವಾರ ಸಂಜೆ ಶರಣ್ಯ ಪತ್ತೆಯಾಗಿದ್ದಾರೆ.

ಶರಣ್ಯ ಪತ್ತೆಗಾಗಿ 4 ದಿನಗಳಿಂದ ಆವಿರತ ಶ್ರಮಿಸಿದ ಪೊಲೀಸ್‌ ,ಅರಣ್ಯ ಇಲಾಖೆ ,ಗ್ರಾಮಸ್ಥರು ಮತ್ತು ಆಧುನಿಕ ಉಪಕರಣ ನೀಡಿದ ರಾಜ್ಯ ಸರ್ಕಾರಕ್ಕೆ -ಶಾಸಕ ಎ.ಎಸ್‌ ಪೊನ್ನಣ್ಣ ಧನ್ಯವಾದ ಮತ್ತು ಅಭಿನಂದನೆ ಸಲ್ಲಿಸಿದರು.

ಕಳೆದ ಮೂರು ದಿನಗಳಿಂದ ಡ್ರೋನ್‌ ಕ್ಯಾಮೆರಾ, ಶ್ವಾನದಳದೊಂದಿಗೆ ಪೊಲೀಸ್‌ ಹಾಗೂ ಅರಣ್ಯ ಇಲಾಖೆಯ 4 ತಂಡಗಳಿಂದ ಬಿರುಸಿನ ಶೋಧ ಕಾರ್ಯ ನಡೆಸಿದೆ. ಮೊಬೈಲ್‌ ಸಿಮ್‌ ಟ್ರ್ಯಾಕಿಂಗ್‌ ಲೊಕೇಶನ್‌ ಮೂಲಕವೂ ಹುಡುಕಾಟ ನಡೆಸಿ, ತಡಿಯಂಡಮೋಳ್‌ ಬೆಟ್ಟಕ್ಕೆ ಒಂದು ತಂಡ ಆಗಮಿಸಿ ಶೋಧ ಕಾರ್ಯ ನಡೆಸಿದೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಕರಾವಳಿ, ಟಾಪ್ ಸುದ್ದಿಗಳು

ಕುಂದಾಪುರ : ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರಿಗೆ ಶುಭಹಾರೈಸಿದ ಕಾಂಗ್ರೆಸ್ ಹಿರಿಯ ಮುಖಂಡ ಅಶೋಕ್ ಪೂಜಾರಿ ಬೀಜಾಡಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ರಾಜ್ಯದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ – ನೂತನ ಸಿಎಂ ಡಿಕೆಶಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಡಿಕೆ ಶಿವಕುಮಾರ್ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾಜಿ ಸ್ಪೀಕರ್ ಯು.ಟಿ.ಖಾದ‌ರ್

⚠️ Contents are protected on this website.