ಕೇರಳದಲ್ಲಿ ಶಶಿ ತರೂರ್ ಬೆಂಗಾವಲು ಮೇಲೆ ದಾಳಿ ಆರೋಪ – ಮೂವರು ಬಂಧನ

ಕೇರಳ, ಏ. 04 : ಮಲಪ್ಪುರಂ ಜಿಲ್ಲೆಯಲ್ಲಿ ಶುಕ್ರವಾರ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಬೆಂಗಾವಲು ವಾಹನವನ್ನು ತಡೆದು, ಅವರ ಭದ್ರತಾ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಸಂಸದರು ವಂಡೂರಿನಲ್ಲಿ ನಡೆಯಲಿದ್ದ ಚುನಾವಣಾ ಪ್ರಚಾರ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ, ತಿರುವಳ್ಳಿ ಚೆಲ್ಲಿತೋಡು ಸೇತುವೆ ಸಮೀಪ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಕೆಲವರು ಬೆಂಗಾವಲು ಪಡೆಯನ್ನು ತಡೆದು ಅಡ್ಡಿಪಡಿಸಿದ್ದು, ಈ ವೇಳೆ ಭದ್ರತಾ ಸಿಬ್ಬಂದಿಗೆ ದೌರ್ಜನ್ಯ ನಡೆಸಲಾಗಿದೆ ಎನ್ನಲಾಗಿದೆ.

ಭದ್ರತಾ ಸಿಬ್ಬಂದಿ ನೀಡಿದ ದೂರಿನ ಆಧಾರದ ಮೇಲೆ ವಂಡೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಜೊತೆಗೆ, ಘಟನೆಗೆ ಸಂಬಂಧಿಸಿದ ಎರಡು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕಾಳಿಕಾವು ಮೂಲದ ಉಮ್ಮಾರ ಎಂಬ ವ್ಯಕ್ತಿಯ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೇರಳದಲ್ಲಿ ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೇ 4 ರಂದು ಮತ ಎಣಿಕೆ ನಡೆಯಲಿದೆ. ಚುನಾವಣಾ ಹಿನ್ನಲೆಯಲ್ಲಿ ಈ ಘಟನೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.