ಬಿಜೆಪಿ ಕಾರ್ಯಕರ್ತರ ಅಕ್ರಮ ದಂಧೆಗಳಿಗೆ ಕಡಿವಾಣ ಬೀಳುವ ಭಯದಿಂದ ಬೆಳ್ತಂಗಡಿ ಪೋಲಿಸ್ ಉಪ ವಿಭಾಗಕ್ಕೆ ಬಿಜೆಪಿಗರು ವಿರೋಧಿಸುತ್ತಿದ್ದಾರೆ : ಶೇಖರ್ ಲಾಯಿಲ

ಬೆಳ್ತಂಗಡಿ : ಪೋಲಿಸ್ ಇಲಾಖೆಯ ಬಲವರ್ಧನೆ ಮತ್ತು ವಿಸ್ತರಣೆಯ ಭಾಗವಾಗಿ ರಾಜ್ಯ ಸರ್ಕಾರ ಬೆಳ್ತಂಗಡಿ ಪೋಲಿಸ್ ಉಪ ವಿಭಾಗವನ್ನು ಇತ್ತೀಚಿಗೆ ಮಂಜೂರುಗೊಳಿಸಿ , ನೂತನ ಡಿವೈಎಸ್ಪಿ ನೇಮಿಸಿದ್ದಾರೆ. ಇದನ್ನು ಸಹಿಸದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮತ್ತು ಬಿಜೆಪಿಗರು ವಿರೋಧಿಸಿ , ಪೋಲಿಸ್ ಇಲಾಖೆಯ ಬಗ್ಗೆ ಸಾರ್ವಜನಿಕರಲ್ಲಿ ಭಯ ಮತ್ತು ಗೊಂದಲ ಉಂಟುಮಾಡಲು ಸುಳ್ಳು ಅಪಪ್ರಚಾರದಲ್ಲಿ ತೊಡಗಿರುವುದು ಅತ್ಯಂತ ಖಂಡನೀಯ ಎಂದು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಬೆಳ್ತಂಗಡಿ (ದ.ಕ) ಸಂಚಾಲಕರಾದ ಶೇಖರ್ ಎಲ್. ತಿಳಿಸಿದ್ದಾರೆ.

Advertisement

ಪೋಲಿಸ್ ಇಲಾಖೆಯಿಂದ ಜನರು ಇನ್ನಷ್ಟು ಸಂಕಷ್ಟ ಎದುರಿಸುತ್ತಾರೆ, ಪೋಲಿಸರು ಜನರನ್ನು ಸುಲಿಗೆ ಮಾಡುತ್ತಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಶಾಸಕರ ನಡೆ ಅತ್ಯಂತ ಬೇಜವಾಬ್ದಾರಿತನದಿಂದ ಕೂಡಿದೆ. ಓರ್ವ ಶಾಸಕನಾಗಿ , ವಕೀಲನಾಗಿ ಪೋಲಿಸ್ ಇಲಾಖೆಯ ಕಾರ್ಯವೈಖರಿ, ಕಾರ್ಯಚಟುವಟಿಕೆಗಳ ಬಗ್ಗೆ ಎಳ್ಳಷ್ಟು ಜ್ಞಾನ ಇಲ್ಲದಿರುವುದು ದುರಂತ. ಇಂತಹ ಅಜ್ಞಾನಿ ಶಾಸಕ ಬೆಳ್ತಂಗಡಿ ತಾಲೂಕಿನಲ್ಲಿರುವುದು ಹಾಸ್ಯಾಸ್ಪದವಾಗಿದೆ. ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡುವವರ ಬಗ್ಗೆ ಕೇಸ್ ದಾಖಲಿಸುವುದು , ದಂಡ ವಿಧಿಸುವುದು ಇಡೀ ದೇಶದಾದ್ಯಂತ ಜಾರಿಯಲ್ಲಿದೆ. ಆದರೂ ನೀಚ ರಾಜಕೀಯ ಮಾಡುವ ಉದ್ದೇಶದಿಂದ ಕೇವಲ ಕರ್ನಾಟಕ ಪೋಲಿಸರು ಮಾತ್ರ ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡುವ ವಾಹನ ಸವಾರರ ಮೇಲೆ ಕೇಸ್ ದಾಖಲಿಸುತ್ತಾರೆ ಎಂಬ ಬಾಲಿಷತನದ ಹೇಳಿಕೆ ನೀಡುವ ಶಾಸಕ ಹರೀಶ್ ಪೂಂಜಾರವರೇ , ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡುವವರನ್ನು ಸನ್ಮಾನ ಮಾಡುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರ ನೀಡಬೇಕು ಮತ್ತು ಇಂತಹ ಅಸಂಬದ್ಧ ಹೇಳಿಕೆ ನೀಡಿ ಪೋಲಿಸರ ಆತ್ಮಸ್ಥೈರ್ಯ ಕುಗ್ಗಿಸುವ ಷಡ್ಯಂತ್ರ ನಡೆಸುತ್ತಿರುವ ಹರೀಶ್ ಪೂಂಜಾನ ವಿರುದ್ಧ ಸ್ವಯಂ ಪ್ರೇರಿತ ಕೇಸ್ ದಾಖಲಿಸಬೇಕು ಎಂದರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಸಚಿವ ಸ್ಥಾನಕ್ಕಾಗಿ ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ 31 ಶಾಸಕರಿಂದ ಪತ್ರ – ಕೈ ಪಾಳಯದಲ್ಲಿ “ಪತ್ರ ಸ್ಫೋಟ”

ಟಾಪ್ ಸುದ್ದಿಗಳು, ರಾಜ್ಯ / ದೇಶ

ತಮಿಳುನಾಡು : ಎಐಎಡಿಎಂಕೆ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ 10,000 ರೂ. ಘೋಷಣೆ !

ವಿದೇಶ

ಅಮೆರಿಕದಲ್ಲಿ ಭಾರಿ ಹಿಮಪಾತ: 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು, ಶಾಲೆಗಳಿಗೆ ರಜೆ

⚠️ Contents are protected on this website.