ಶಿವಮೊಗ್ಗ : ಬೆಳ್ಳಂಬೆಳಗ್ಗೆ ಪೊಲೀಸರ ಗುಂಡಿನ ಸದ್ದು – ಆರೋಪಿ ಕಾಲಿಗೆ ಗುಂಡೇಟು !

Advertisement

ಶಿವಮೊಗ್ಗ, ಸೆ. 07 : ನಗರದಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರ ಗುಂಡಿನ ಸದ್ದು ಮೊಳಗಿದೆ. ಭಾನುವಾರ (ಸೆ.6) ಸಂಜೆ ನಡೆದಿದ್ದ ರೌಡಿಶೀಟರ್ ಕಿರಣ್ ಅಲಿಯಾಸ್ ಕುಳ್ಳಿ ಕಿರಣ್ ಕೊಲೆ ಆರೋಪಿ ಕಾಲಿಗೆ ಪೊಲೀಸರು ಗುಂಡೇಟು ನೀಡಿದ್ದಾರೆ.

Advertisement

ಕೊಲೆ ಆರೋಪಿ ಉಮೇಶ್ ನಾಯ್ಕ್ (27) ಕಾಲಿಗೆ ಪೊಲೀಸರು ಗುಂಡೇಟು ನೀಡಿದ್ದಾರೆ. ಆರೋಪಿಯನ್ನು ಬಂಧಿಸಲು ಪೊಲೀಸರು ಲಿಂಗಾಪುರಕ್ಕೆ ತೆರಳಿದ್ದರು. ಈ ವೇಳೆ ಪೊಲೀಸ್ ಸಿಬ್ಬಂದಿ ತಮ್ಮಣ್ಣ ಜಂಬಗಿ ಮೇಲೆ ಆರೋಪಿ ಹಲ್ಲೆ ಮಾಡಿದ್ದಾನೆ. ಹಲ್ಲೆ ಮಾಡದಂತೆ ತುಂಗಾನಗರ ಇನ್ಸ್‌ಪೆಕ್ಟರ್ ಗುರುರಾಜ್ ಕರ್ಕಿ‌ ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದಾರೆ. ಆದರೆ ಆರೋಪಿ ಪೊಲೀಸರ ಮೇಲೆ ಮತ್ತೆ ಹಲ್ಲೆ ನಡೆಸಿದ್ದು, ಆತನ ಕಾಲಿಗೆ ಗುಂಡೇಟು ನೀಡಿದ್ದಾರೆ.

Advertisement

ಗುಂಡೇಟಿನಿಂದ ಗಾಯಗೊಂಡ ಉಮೇಶ್ ನಾಯ್ಕ್‌ನನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸ್ ಸಿಬ್ಬಂದಿ ತಮ್ಮಣ್ಣಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಮಿನಕೊಪ್ಪದಲ್ಲಿ ಕಿರಣ್ ಅಲಿಯಾಸ್ ಕುಳ್ಳಿ ಕಿರಣ್‌ನನ್ನು 3-4 ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ