ಶಿವಮೊಗ್ಗ : ಸರಕಾರಿ ಅಧಿಕಾರಿಗಳ ನಿವಾಸ, ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ

ಶಿವಮೊಗ್ಗ, ಏ. 07 : ಜಿಲ್ಲೆಯ ವಿವಿಧೆಡೆ ಸರಕಾರಿ ಅಧಿಕಾರಿಗಳ ನಿವಾಸ, ಕಚೇರಿ ಮೇಲೆ ಮಂಗಳವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Advertisement

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶೋಭಾ ಕೆ.ಆರ್. ಅವರಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ, ಪರಿಶೀಲನೆ ನಡೆಸಲಾಗುತ್ತಿದೆ. ಶಿವಮೊಗ್ಗ ಶಿಕಾರಿಪುರ ಹಾಗೂ ಸಾಗರ ಸೇರಿದಂತೆ ಒಟ್ಟು ಐದು ಸ್ಥಳಗಳಲ್ಲಿ ಲೋಕಾಯುಕ್ತ ತಂಡಗಳು ಕಾರ್ಯಾಚರಣೆ ಕೈಗೊಂಡಿವೆ.

ಶಿಕಾರಿಪುರ ಪಟ್ಟಣದ ಚೆನ್ನಕೇಶವ ನಗರದಲ್ಲಿರುವ ಶೋಭಾ ಅವರ ನಿವಾಸ ಹಾಗೂ ಸಾಗರ ತಾಲೂಕಿನ ಅಚಾಪುರ ಬಳಿ ಇರುವ ಅವರ ಮನೆಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಶೋಭಾ ಅವರ ಆಪ್ತ ಸಹಾಯಕನ ಮನೆ ಮೇಲೆಯೂ ಲೋಕಾಯುಕ್ತ ದಾಳಿ ನಡೆದಿದೆ.

ದಾವಣಗೆರೆ ಲೋಕಾಯುಕ್ತ ಎಸ್ಪಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದ್ದು ದಾಳಿಯಲ್ಲಿ ಶಿವಮೊಗ್ಗ ಹಾವೇರಿ ಹಾಗೂ ದಾವಣಗೆರೆ ಜಿಲ್ಲೆಗಳ ಲೋಕಾಯುಕ್ತ ಅಧಿಕಾರಿಗಳನ್ನೊಳಗೊಂಡ ಐದು ಪ್ರತ್ಯೇಕ ತಂಡಗಳು ಪಾಲ್ಗೊಂಡಿವೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.