ರಾಜ್ಯಪಾಲರು ಕೇಂದ್ರ ಸರ್ಕಾರದ ತಾಳಕ್ಕೆ ತಕ್ಕಂತೆ ಕುಣಿಯುವುದನ್ನು ನಿಲ್ಲಿಸಬೇಕು : ರಕ್ಷಿತ್ ಶಿವರಾಂ

ಬೆಳ್ತಂಗಡಿ, ಜ. 22 : ವಿಧಾನಮಂಡಲವನ್ನು ಉದ್ದೇಶಿಸಿ ರಾಜ್ಯಪಾಲರು ಮಾಡುವ ಭಾಷಣವನ್ನು ‘ರಾಜ್ಯ ಸಚಿವ ಸಂಪುಟ’ ಒದಗಿಸುತ್ತದೆ. ಆ ಭಾ಼ಷಣದಲ್ಲಿ ಕೇಂದ್ರ ಸರ್ಕಾರದ ವಿರುದ್ದದ ವಿಷಯಗಳಿವೆ ಎಂಬ ಕಾರಣಕ್ಕಾಗಿ ರಾಜ್ಯಪಾಲರು ಭಾಷಣವನ್ನು ನಿರಾಕರಿಸುವಂತಿಲ್ಲ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತಿಳಿಸಿದ್ದಾರೆ.

Advertisement

“ರಾಜ್ಯಪಾಲರು ಯಾವುದೇ ಪಕ್ಷದ ಸದಸ್ಯರಲ್ಲ ಇಂದು ಕರೆದಿದ್ದ ವಿಶೇಷ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಬೇಕಿದ್ದ ರಾಜ್ಯಪಾಲರು ಸಂವಿಧಾನದ ಆಶಯಕ್ಕೆ ಧಕ್ಕೆ ತಂದಿದ್ದಾರೆ. ಕ್ಯಾಬಿನೆಟ್ ನಲ್ಲಿ ಅನುಮೋದನೆ ಪಡೆದು ಸರ್ಕಾರ ತಯಾರು ಮಾಡಿರುವಂತ ಭಾಷಣವನ್ನು ಗಾಳಿಗೆ ತೂರಿ ತಮ್ಮದೇ ಭಾಷಣವನ್ನ ಓದುವ ಮುಖಾಂತರ ಸಂವಿಧಾನದ ವಿಧಿ 176(1) & 163 ರಿಗೆ ದಕ್ಕೆ ತರುವಂತ ಕೆಲಸವನ್ನು ಮಾಡಿದ್ದಾರೆ. ಕರ್ನಾಟಕದ ಶ್ರೀಮಂತ ಸಂಸದೀಯ ಪರಂಪರೆಗೆ ಚ್ಯುತಿ ಬರುವ ರೀತಿಯಲ್ಲಿ ವರ್ತಿಸಿದ್ದಾರೆ. ಅವರ ಈ ಸಂವಿಧಾನ ವಿರೋಧಿ ನಡವಳಿಕೆಯನ್ನು ರಾಜ್ಯದ ಎಲ್ಲಾ ಜನರು ಖಂಡಿಸಬೇಕು ಮತ್ತು ಕರ್ನಾಟಕದಂತ ಪ್ರಗತಿ ಹೊಂದಿದ ರಾಜ್ಯದಲ್ಲಿ ಈ ರೀತಿಯ ಅಸಂವಿಧಾನಿಕವಾಗಿ ನಡೆದುಕೊಳ್ಳುತ್ತಿರುವ ರಾಜ್ಯಪಾಲರನ್ನು ಕೇಂದ್ರ ಸರ್ಕಾರ ಹಿಂಪಡೆದುಕೊಳ್ಳಬೇಕು” ಎಂದು ಪತ್ರಿಕಾ ಪ್ರಕಟನೆಯ ಮೂಲಕ ರಕ್ಷಿತ್ ಶಿವರಾಂ ಆಗ್ರಹಿಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.