ಪುತ್ತೂರು : ‘ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್’ ಸಂಸ್ಥೆಯ ಮಾಲೀಕ ಮುಳಿಯ ಶ್ಯಾಮ ಭಟ್  ನಿಧನ

ಪುತ್ತೂರು, ಅ. 05 : ಗ್ರಾಹಕರ ನೆಚ್ಚಿನ ‘ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್’ ಸಂಸ್ಥೆಯ ಮಾಲೀಕರಾದ ಮುಳಿಯ ಸಾರಾಫ ಶ್ಯಾಮ ಭಟ್ (81 ವರ್ಷ) ಅವರು ಅಕ್ಟೋಬರ್ 4ರಂದು ನಿಧನ ಹೊಂದಿದ್ದಾರೆ.

ಪುತ್ತೂರಿನ ಪಾಂಗಳಾಯಿಯಲ್ಲಿರುವ ಶ್ಯಾಮಲೋಚನಾ ನಿವಾಸದಲ್ಲಿ ಅಲ್ಪಕಾಲದ ಅಸೌಖ್ಯದಿಂದ ಅವರು ಕೊನೆಯುಸಿರೆಳೆದರು.

ಚಿನ್ನಾಭರಣ, ಬೆಳ್ಳಿ ಮತ್ತು ವಜ್ರ ವ್ಯವಹಾರ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಮುಳಿಯ ಶ್ಯಾಮ ಭಟ್ ಅವರು ‘ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್’ ಸಂಸ್ಥೆಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇವರು ಪುತ್ತೂರು, ಬೆಂಗಳೂರು, ಮಡಿಕೇರಿ, ಗೋಣಿಕೊಪ್ಪಲು ಹಾಗೂ ಬೆಳ್ತಂಗಡಿಯಲ್ಲಿ ಶೋರೂಮ್ ಹೊಂದಿ ರಾಜ್ಯದ ವಿವಿಧೆಡೆ ಶೋ ರೂಮ್ ಹೊಂದಿದ್ದಾರೆ.

ಸಾಮಾಜಿಕ, ಸಾಹಿತ್ಯ ಕ್ಷೇತ್ರ ಮಾತ್ರವಲ್ಲದೇ ಧಾರ್ಮಿಕ ಕ್ಷೇತ್ರಗಳಿಗೆ ದಾನ ನೀಡುತ್ತಿದ್ದ ಅವರು ಕೊಡುಗೈ ದಾನಿ ಎಂದೇ ಪ್ರಸಿದ್ಧರಾಗಿದ್ದರು. ಅಕ್ಟೋಬ‌ರ್ 6ರಂದು ಬೆಳಿಗ್ಗೆ 8ರಿಂದ ಮಧ್ಯಾಹ್ನ 12ರವರೆಗೆ ಪುತ್ತೂರಿನ ಪಾಂಗಳಾಯಿ ಮನೆಯಲ್ಲಿ ಅಂತಿಮ ದರ್ಶನ ಮತ್ತು ಗೌರವ ಸಮರ್ಪಣೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ :  ಟೆಂಪೋ ಹಾಗೂ 2 ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ – ಸ್ಕೂಟ‌ರ್ ಸವಾರ ಸಾವು

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಇವರ ನೂತನ ಉತ್ಪನ್ನ ನೂತನ ತಂತ್ರಜ್ಞಾನದ “ಲಕ್ಷ್ಮೀದ್ವಾರ” ಲೋಕಾರ್ಪಣೆ

ಟಾಪ್ ಸುದ್ದಿಗಳು

ಬೆಳ್ತಂಗಡಿ : ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ವತಿಯಿಂದ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ 7ನೇ ವರ್ಷದ ದೀಪಾವಳಿ ದೋಸೆ ಹಬ್ಬ-2026, ಸಹಸ್ರಾರು ಜನರು ಭಾಗಿ !