ಬೆಳ್ತಂಗಡಿ : ಭಾರತದ ಸಂವಿಧಾನ ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಮತದಾನದ ಹಕ್ಕನ್ನು ನೀಡಿದೆ – ರಕ್ಷಿತ್ ಶಿವರಾಂ

ಬೆಳ್ತಂಗಡಿ, ಜು. 9 : ತಾಲೂಕಿನ ಮೆಲಂತಬೆಟ್ಟು ಕಾಂಗ್ರೆಸ್ ಗ್ರಾಮ ಪಂಚಾಯತ್ ಸಮಿತಿ, ಮುಂಡೂರು ಕಾಂಗ್ರೆಸ್ ಗ್ರಾಮ ಸಮಿತಿ ಆಶ್ರಯದಲ್ಲಿ, ಮುಂಡೂರು ಶ್ರೀ ಶಾರದಾಂಬ ಯುವಕ ಮಂಡಲದಲ್ಲಿ ಎಸ್.ಐ.ಆರ್. ಮಾಹಿತಿ ಕೇಂದ್ರವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಉದ್ಘಾಟಿಸಿದರು.

Advertisement

ಬಳಿಕ ಮಾತನಾಡಿದ ಅವರು, ಎಸ್.ಐ.ಆರ್. ಮಾಹಿತಿ ಕೇಂದ್ರಕೇವಲ ಒಂದು ಕಚೇರಿ ಅಲ್ಲ, ಇದು ಪ್ರಜಾಪ್ರಭುತ್ವದ ಹಕ್ಕುಗಳನ್ನು ರಕ್ಷಿಸುವ ಜನಸೇವಾ ಕೇಂದ್ರವಾಗಿದೆ. ಭಾರತದ ಸಂವಿಧಾನ ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಮತದಾನದ ಹಕ್ಕನ್ನು ನೀಡಿದೆ. ಆ ಹಕ್ಕು ಸುರಕ್ಷಿತವಾಗಿರುವಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ನಡೆಯುತ್ತಿರುವ ಈ ಸಂದರ್ಭದಲ್ಲಿ ಅನೇಕ ಜನರಿಗೆ ದಾಖಲೆಗಳ ಬಗ್ಗೆ, ಅರ್ಜಿ ಸಲ್ಲಿಸುವ ವಿಧಾನ, ಹೆಸರು ಸೇರ್ಪಡೆ, ತಿದ್ದುಪಡಿ ಅಥವಾ ವರ್ಗಾವಣೆಯ ಬಗ್ಗೆ ಗೊಂದಲಗಳಿವೆ. ಅಂತಹ ಎಲ್ಲರಿಗೂ ಸರಿಯಾದ ಮಾಹಿತಿ, ಅಗತ್ಯ ಮಾರ್ಗದರ್ಶನ ಮತ್ತು ನೆರವು ನೀಡುವ ಉದ್ದೇಶದಿಂದ ಈ ಮಾಹಿತಿ ಕೇಂದ್ರವನ್ನು ಆರಂಭಿಸಲಾಗಿದೆ.

ಯಾವುದೇ ಅರ್ಹ ಮತದಾರರು ತಮ್ಮ ಹಕ್ಕಿನಿಂದ ವಂಚಿತರಾಗಬಾರದು ಎಂಬುದು ನಮ್ಮ ಆಶಯ. ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೆ ಅಥವಾ ಯಾವುದೇ ತಪ್ಪುಗಳಿದ್ದರೆ, ಅದನ್ನು ಸರಿಪಡಿಸಲು ಈ ಕೇಂದ್ರದಲ್ಲಿ ಅಗತ್ಯ ಸಹಾಯ ಒದಗಿಸಲಾಗುತ್ತದೆ. ನಮ್ಮ ಕಾರ್ಯಕರ್ತರು ಮನೆ ಮನೆಗೆ ತೆರಳಿ ಜನರಿಗೆ ಜಾಗೃತಿ ಮೂಡಿಸುವ ಕೆಲಸವನ್ನೂ ಮಾಡಲಿದ್ದಾರೆ. ನಾನು ನಮ್ಮ ಪಕ್ಷದ ಎಲ್ಲಾ ಕಾರ್ಯಕರ್ತರಲ್ಲಿ ವಿನಂತಿಸಿಕೊಳ್ಳುವುದೇನೆಂದರೆ, ಈ ಕೆಲಸವನ್ನು ರಾಜಕೀಯ ಕಾರ್ಯಕ್ರಮವಾಗಿ ಮಾತ್ರ ನೋಡದೆ, ಪ್ರಜಾಪ್ರಭುತ್ವದ ಸೇವೆಯಾಗಿ ನಿರ್ವಹಿಸಿ. ಪ್ರತಿಯೊಬ್ಬ ಅರ್ಹ ನಾಗರಿಕನ ಹೆಸರೂ ಮತದಾರರ ಪಟ್ಟಿಯಲ್ಲಿ ಇರುವಂತೆ ಖಚಿತಪಡಿಸಲು ಶ್ರಮಿಸಿ. ಈ ಮಾಹಿತಿ ಕೇಂದ್ರಕ್ಕೆ ಬರುವ ಪ್ರತಿಯೊಬ್ಬರಿಗೂ ಗೌರವಯುತವಾಗಿ, ತಾಳ್ಮೆಯಿಂದ ಮತ್ತು ಜವಾಬ್ದಾರಿಯಿಂದ ಸೇವೆ ನೀಡಬೇಕು. ಜನರ ವಿಶ್ವಾಸ ಗಳಿಸುವುದೇ ನಮ್ಮ ದೊಡ್ಡ ಸಾಧನೆ ಎಂದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಶಾಫಿ, ಎಸ್ಐಆರ್ ಮೇಲಂತಬೆಟ್ಟು ಗ್ರಾಮ ಪಂಚಾಯತ್ ಉಸ್ತುವಾರಿ ರಮಾನಂದ ಸಾಲಿಯನ್, ಮುಂಡೂರು ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಅಶೋಕ್ ಜೈನ್, ಪ್ರಧಾನ ಕಾರ್ಯದರ್ಶಿ ಅಶೋಕ್ ಕುಮಾರ್ ಕೊಡಕಲ್, ಪಕ್ಷದ ಪ್ರಮುಖರಾದ ನಾರಾಯಣ ಪೂಜಾರಿ ಮೇಲೆಂತೆಬೆಟ್ಟು, ಜಯನಂದ ಪಿಲಿಕಲ, ಶ್ರೀಮತಿ ನೀತಾ ಮಹೇಶ್ ಕುಮಾರ್ ನಡಕರ, ಶ್ರೀಧರ್ ಅಂಚನ್, ಕಾರ್ಯಕರ್ತರಾದ ಅಬ್ದುಲ್ ಹಕೀಮ್, ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ನವೀನ್ ಗೌಡ ಸವಣಾಲು, ಹರಿಶ್ಚಂದ್ರ ಹೆಗಡೆ, ಇಸುಬು ಬಡಕಿಲ್ಲ, ಆದಂ ದುರ್ಗಾ ನಗರ, ರಾಜೇಶ್ ಭಟ್ ಸವಣಾಲು, ಫ್ರಾನ್ಸಿಸ್ ಫೆರ್ನಾಂಡಿಸ್, ವಿನೋದ್ ಬದ್ಯಾರ್ , ಪ್ರಮೋದ್ ಮೇಲಂತಬೆಟ್ಟು, ಚಂದ್ರಶೇಖರ ಸವಣಾಲು, ಚಿದಾನಂದ ಶೆಟ್ಟಿ ಸವಣಾಲು, ಶ್ರೀಮತಿ ಸುನಿತಾ ಆನಂದ ಸಾಲಿಯಾನ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

⚠️ Contents are protected on this website.