ಧರ್ಮಸ್ಥಳ : ಭಾರತದ ಉಪರಾಷ್ಟ್ರಪತಿ ಸಿ. ಪಿ. ರಾಧಾಕೃಷ್ಣನ್ ರಿಂದ “ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್” ಉದ್ಘಾಟನೆ

ಧರ್ಮಸ್ಥಳ, ಮೇ 31 : “ಸಿರಿ” ಗ್ರಾಮೋದ್ಯೋಗ ಸಂಸ್ಥೆಗಾಗಿ ನಿರ್ಮಾಣಗೊಂಡಿರುವ ಸುಸಜ್ಜಿತ “ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ನ್ನು ಮೇ 31 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ ಸಮಾರಂಭದಲ್ಲಿ ದೀಪ ಬೆಳಗಿಸಿ, ನಾಮಫಲಕ ಅನಾವರಣ ಗೊಳಿಸಿ ಭಾರತದ ಉಪರಾಷ್ಟ್ರಪತಿ ಸಿ. ಪಿ. ರಾಧಾಕೃಷ್ಣನ್ ಲೋಕರ್ಪಾಣೆಗೊಳಿಸಿದರು.

Advertisement

ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್ ಗೆಹೋಟ್ ಗೌರವ ಉಪಸ್ಥಿತಿಯಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಅಧ್ಯಕ್ಷರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಗೌರವಾನ್ವಿತ ಅತಿಥಿಗಳಾಗಿ ಸಂಸದ ಬ್ರಿಜೇಶ್ ಚೌಟ, ವಿಧಾನಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್, “ಸಿರಿ” ಸಂಸ್ಥೆಯ ಸಂಸ್ಥಾಪಕರು ಹಾಗೂ ಜ್ಞಾನವಿಕಾಸ ಕಾರ್ಯಕ್ರಮದ ಅಧ್ಯಕ್ಷರಾದ ಹೇಮಾವತಿ ವೀ. ಹೆಗ್ಗಡೆ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆ ಉಜಿರೆಯ ಉಪಾಧ್ಯಕ್ಷರಾದ ಡಿ. ಸುರೇಂದ್ರ ಕುಮಾ‌ರ್, ರಾಜ್ಯಸಭೆ ದೆಹಲಿ ಕಾರ್ಯದರ್ಶಿ ಡಾ.ಕೆ.ಎಸ್. ಸೋಮಶೇಖರ್ ಭಾಗವಹಿಸಿದ್ದರು.

ಸಿರಿ ಸಂಸ್ಥೆಯ ರಾಯಬಾರಿ ನಟ ರಮೇಶ್ ಅರವಿಂದ್, ಸಿರಿ ಸಂಸ್ಥೆಯ ನಿರ್ದೇಶಕ ರಾಜೇಶ್ ಪೈ, ಕುಸುಮ ದೇವಾಡಿಗ, ಪ್ರಸನ್ನ, ಯೋಜನೆಯ ಕಾರ್ಯನಿರ್ವಕ ನಿರ್ದೇಶಕ ಅನಿಲ್ ಕುಮಾರ್ ಎಸ್. ಎಸ್, ಶ್ರೇಯಸ್ ಕುಮಾರ್, ಎಸ್ ಡಿ ಎಂ ಆಸ್ಪತ್ರೆಯ ಕಾರ್ಯನಿರ್ವಹಕ ನಿರ್ದೇಶಕ ಎಂ.ಜನಾರ್ದನ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಗಣ್ಯರು, ಜನಪ್ರತಿನಿಧಿಗಳು, ಸಿರಿ ಸಂಸ್ಥೆಯ ಪದಾಧಿಕಾರಿಗಳು, ಗ್ರಾಹಕರು ಭಾಗವಹಿಸಿದ್ದರು. ಸುಪ್ರೀತಾ ಧರ್ಮಸ್ಥಳ ಇವರ ಪ್ರಾರ್ಥನೆ ಬಳಿಕ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ದನ್ ಸ್ವಾಗತಿಸಿದರು. ಉಜಿರೆ ಕಾಲೇಜು ಪ್ರಾಧ್ಯಾಪಕ ಡಾ. ಶ್ರೀಧರ ಭಟ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.