ಸಿರಿಯಾದ ಹೋಮ್ಸ್ ಮಸೀದಿಯಲ್ಲಿ ಭೀಕರ ಸ್ಫೋಟ – 8 ಮಂದಿ ಮೃತ್ಯು, 20ಕ್ಕೂ ಹೆಚ್ಚು ಮಂದಿಗೆ ಗಾಯ

Advertisement

ಸಿರಿಯಾ, ಡಿ. 27 : ಸಿರಿಯಾದ ಮಧ್ಯ ಭಾಗದಲ್ಲಿರುವ ಹೋಮ್ಸ್ ನಗರದಲ್ಲಿ ಪ್ರಾರ್ಥನೆಯ ಸಮಯದಲ್ಲಿ ಸಂಭವಿಸಿದ ಭೀಕರ ಸ್ಫೋಟ ಸಂಭವಿಸಿದೆ. ಈ ಅವಘಡದಲ್ಲಿ ಕನಿಷ್ಠ 8 ಮಂದಿ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

Advertisement

ಸರ್ಕಾರಿ ನಿಯಂತ್ರಣದಲ್ಲಿರುವ ವಾಡಿ ಅಲ್-ದಹಾಬ್ ಪ್ರದೇಶದ ಇಮಾಮ್ ಅಲಿ ಬಿನ್ ಅಬಿ ತಾಲಿಬ್ ಮಸೀದಿಯೊಳಗೆ ಸ್ಫೋಟ ಸಂಭವಿಸಿದೆ ಎಂದು ಸಿರಿಯನ್ ಅರಬ್ ಸುದ್ದಿ ಸಂಸ್ಥೆ (SANA) ವರದಿ ಮಾಡಿದೆ.

Advertisement

ಸ್ಫೋಟದ ತಕ್ಷಣವೇ ತುರ್ತು ಪ್ರತಿಕ್ರಿಯಾ ತಂಡಗಳು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ಸ್ಥಳಾಂತರಿಸಿವೆ. ಭದ್ರತಾ ಪಡೆಗಳು ಮಸೀದಿ ಹಾಗೂ ಸುತ್ತಮುತ್ತಲ ಪ್ರದೇಶವನ್ನು ಸುತ್ತುವರೆದು ಭದ್ರತೆ ಬಿಗಿಗೊಳಿಸಿವೆ. ಸ್ಫೋಟದ ಸ್ವರೂಪ ಮತ್ತು ಕಾರಣ ಇನ್ನೂ ಸ್ಪಷ್ಟವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಇದು ಆತ್ಮಾಹುತಿ ದಾಳಿ ಇರಬಹುದೆಂಬ ಶಂಕೆಯನ್ನು ಭದ್ರತಾ ವಲಯಗಳು ವ್ಯಕ್ತಪಡಿಸಿವೆ. ಘಟನೆ ಸಂಬಂಧ ತನಿಖೆ ಮುಂದುವರಿದಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ